ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ತಂತ್ರಜ್ಞಾನ, ನೈಸರ್ಗಿಕ ಕೃಷಿ ತಂತ್ರಜ್ಞಾನ, ಪಶು ಸಂಗೋಪನೆ ತಂತ್ರಜ್ಞಾನ, ಸಿರಿಧಾನ್ಯಗಳು ಹಾಗೂ ಮೌಲ್ಯ ವರ್ಧನೆ, ಸಾವಯವ ಕೃಷಿ ಮಳಿಗೆ. ಕೃಷಿಯ ಹೊಸ ಹೊಸ ತಂತ್ರಜ್ಞಾನ ಜೊತೆಗೆ ಸಿರಿ ಧಾನ್ಯಗಳಿಂದ ತಯಾರಿಸಿದ್ದ ವಿವಿಧ ಬಗೆಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಭರ್ಜರಿಯಾಗಿ ನಡೆಯಿತು. ಕೃಷಿ ಸಂಸ್ಕರಣೆ ಘಟಕ, ಬೀಜ ಸಂಸ್ಕರಣಾ ಘಟಕ, ಸಿರಿಧಾನ್ಯ ಸಂಸ್ಕರಣಾ ಘಟಕ, ಅಜೋಲ್ಲಾ, ಎರೆಹುಳು ಗೊಬ್ಬರ, ಆಡು ಸಾಕಾಣಿಕೆ, ಮಣ್ಣು ಮತ್ತು ನೀರು ಪರೀಕ್ಷೆ, ಸಾವಯವ ಕೃಷಿ, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ಸಿರಿಧಾನ್ಯಗಳ ಮಹತ್ವ, ಹೈನುಗಾರಿಕೆಯಲ್ಲಿ ತಂತ್ರಜ್ಞಾನ ಬಳಕೆ ಕುರಿತು ಈ ಮೇಳದಲ್ಲಿ ವಿವರಿಸಿರುವುದು ಎಲ್ಲರ ಗಮನ ಸೆಳೆಯಿತು. ಪ್ರತಿ ವರ್ಷವೂ ಕೈಲಾಸ ಆಶ್ರಮದ ಜಾತ್ರೆ-ವಾರ್ಷಿಕೋತ್ಸವದಲ್ಲಿ ಕೃಷಿ ಮೇಳ ಆಯೋಜಿಸುವುದರಿಂದ ರೈತರಿಗೆ ಹೆಚ್ಚಿನ ಮಾಹಿತಿ ಒದಗಿಸಲಾಗುತ್ತದೆ.