ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಾರ್ಯಾಲಯದಲ್ಲಿ ಸಂಸ್ಥಾಪನಾ ದಿನಾಚರಣೆ ಜರುಗಿತು. ಕಸಾಪ ಅಧ್ಯ ವಿವೇಕಾನಂದಗೌಡ ಪಾಟೀಲ, ಸಂತೋಷ ಬೆಳವಡಿ, ಎಸ್.ಎಸ್.ಪಟ್ಟಣಶೆಟ್ಟರ, ಬಸವರಾಜ ಧಾರವಾಡ ಇತರರು ಇದ್ದರು.
ಕನ್ನಡ, ಕನ್ನಡಿಗ, ಕರ್ನಾಟಕ ವಿಷಯಕ್ಕೆ ಸಂಬಂಧಿಸಿದಂತೆ ಪೂರಕ ಕಾರ್ಯಕ್ರಮಗಳನ್ನು ಹಾಗೂ ಹೋರಾಟಗಳನ್ನು ರೂಪಿಸಿಕೊಂಡು ಬಂದು ಕನ್ನಡಿಗರಲ್ಲಿ ಕನ್ನಡದ ಪ್ರಜ್ಞೆಯನ್ನು ಸದಾ ಜೀವಂತವಾಗಿರುವ ಕಾರ್ಯವನ್ನು ಪರಿಷತ್ತು ಶತಮಾನದಿಂದ ಮಾಡುತ್ತ ಬಂದಿದೆ ಎಂದು ನ್ಯಾಯವಾದಿ, ಸಾಹಿತಿ ಬಸವರಾಜ ಬಾಳೇಶ್ವರಮಠ ತಿಳಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಡಿ. ಜಿ. ಮೇಲ್ಮಾಳಗಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ಶುಕ್ರವಾರ ಜರುಗಿದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಕನ್ನಡಿಗರು ಅಭಿಮಾನ ಶೂನ್ಯರಾಗದೇ ಭಾಷೆಯ ಅಭಿವೃದ್ಧಿಗೆ ಕೈ ಜೋಡಿಸಬೇಕು. ಈ ದಿಸೆಯಲ್ಲಿ ಕನ್ನಡ, ಕನ್ನಡಿಗ, ಕರ್ನಾಟಕದ ಸಮಗ್ರ ಏಳ್ಗೆಯೇ ಕಾರ್ಯ ಮಾಡುತ್ತಿರುವ ಪರಿಷತ್ತಿನ ನಡೆ ಮಾದರಿ ಆಗಿದೆ. ಸಾಹಿತ್ಯ, ಸಂಸತಿ ಸಂವರ್ಧನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ ಹಿರಿಮೆ ಇದೆ. ಕರ್ನಾಟಕ ಏಕೀಕರಣ ಮತ್ತು ನಾಮಕರಣದಲ್ಲಿ ಪರಿಷತ್ತಿನ ಪಾತ್ರ ಮಹತ್ವದ್ದಾಗಿದೆ. ಜಿಲ್ಲೆ ಪರಿಷತ್ತಿನ ಕಾರ್ಯಗಳು ಮಾದರಿಯಾಗಿವೆ ಎಂದರು.
ಡಿಜಿಎಂ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಸಂತೋಷ ಬೆಳವಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡಿಗರು ಸ್ವಾಭಿಮಾನವನ್ನು ಹೊಂದಿ ಕನ್ನಡದ ಬೆಳವಣಿಗೆಗೆ ಶ್ರಮಿಸಬೇಕು. ಉನ್ನತ ಶಿಣದ ಪಠ್ಯಗಳು ಕನ್ನಡದಲ್ಲಿ ದೊರೆಯುವಂತೆ ಮಾಡುವ ಮೂಲಕ ಬೇರೆ ಭಾಷೆಗಳ ಅನಿವಾರ್ಯತೆಯನ್ನು ಕಡಿಮೆಗೊಳಿಸಬಹುದು ಎಂದು ತಿಳಿಸಿದರು.
ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನ, ಪುಸ್ತಕ ಪ್ರಕಟನೆ, ಕಾರ್ಯಾಗಾರಗಳ ಮೂಲಕ ಕನ್ನಡಿಗರಲ್ಲಿ ಜಾಗೃತಿಯನ್ನು ಮೂಡಿಸುವ ಕಾರ್ಯವನ್ನು ಮಾಡಿದೆ. ಕನ್ನಡ ನಾಡು ನುಡಿ, ನೆಲ ಜಲದ ಪ್ರಶ್ನೆ ಬಂದಾಗ ಪರಿಷತ್ತು ಮುಂಚೂಣಿಯಲ್ಲಿ ನಿಂತು ಕನ್ನಡಿಗರಿಗೆ ನ್ಯಾಯ ಒದಗಿಸುವ ಕಾರ್ಯ ಮಾಡುತ್ತಿದೆ. ಕನ್ನಡಿಗರೆಲ್ಲ ಪರಿಷತ್ತಿನ ಸದಸ್ಯರಾಗುವ ಮೂಲಕ ಶಕ್ತಿಯನ್ನು ಇಮ್ಮಡಿಗೊಳಿಸುವ ಕಾರ್ಯ ಮಾಡಬೇಕಿದೆ. ಕನ್ನಡ ಶಾಲೆಗಳ ಸಬಲೀಕರಣ ಪ್ರಥಮ ಆದ್ಯತೆ ಆಗಬೇಕು ಎಂದು ಹೇಳಿಸಿದರು.
ತೋಂಟದಾರ್ಯ ವಿದ್ಯಾಪಿಠದ ಕಾರ್ಯದಶಿರ್ ಎಸ್. ಎಸ್. ಪಟ್ಟಣಶೆಟ್ಟರ ಮಾತನಾಡಿ, ಶಿಣದ ಚಟುವಟಿಕೆಗಳು ಭಾಷೆಯನ್ನು ಸಮೃದ್ಧವಾಗಿ ಬೆಳೆಸುತ್ತವೆ. ಈ ದಿಸೆಯಲ್ಲಿ ತೋಂಟದ ಸಿದ್ಧಲಿಂಗಶ್ರೀಗಳು ಭಾಷಾ ಬೆಳವಣಿಗೆ ಮತ್ತು ಉದ್ಯೋಗದ ದೃಷ್ಠಿಯಿಂದ ಶಿಣ ಸಂಸ್ಥೆಗಳನ್ನು ಪ್ರಾರಂಭಿಸಿದರು ಎಂದು ತಿಳಿಸಿದರು.
ಶಿಣ ತ ಡಾ. ಬಸವರಾಜ ಧಾರವಾಡ ಮಾತನಾಡಿ, ಸರ್ಕಾರಿ ಶಾಲೆಗಳ ಸಬಲೀಕರಣ ಸರ್ಕಾರ ಮುಖ್ಯ ಆಧ್ಯತೆ ಆಗಬೇಕು. ಕನ್ನಡದ ಬೆಳವಣಿಗೆಗೆ ಕನ್ನಡ ಮಾಧ್ಯಮ ಶಾಲೆಗಳ ಕೊಡುಗೆ ಅಪಾರವಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಭಾಷೆಯ ಬೆಳವಣಿಗೆಯಲ್ಲಿ ಅಪಾರ ಕೊಡುಗೆ ನೀಡಿದೆ. ಜಿಲ್ಲೆಯಲ್ಲಿ ವಿವೇಕಾನಂದಗೌಡ ಪಾಟೀಲ ಅವರ ನೇತೃತ್ವದಲ್ಲಿ ಉತ್ತಮ ಕಾರ್ಯಗಳು ನಡೆಯುತ್ತಿರುವ ಸದಸ್ಯರಲ್ಲಿ ಸಂತಸ ಮೂಡಿಸಿದೆ ಎಂದು ತಿಳಿಸಿದರು.
ಶಿಣದ ಉನ್ನತಿಗೆ ಶ್ರಮಿಸಿದ ಎಸ್.ಎಸ್.ಪಟ್ಟಣಶೆಟ್ಟರ ಹಾಗೂ ಡಾ. ಬಸವರಾಜ ಧಾರವಾಡ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.