ಗದಗ: ಜಿಲ್ಲೆಯ ಲಕ್ಕುಂಡಿ ಗ್ರಾಮದ ವಾರ್ಡ ನಂ 4ರಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆಗೆ ಅಡಿಪಾಯ ಅಗೆಯುವ ಸಂದರ್ಭದಲ್ಲಿ ನಿಧಿ ಸಿಕ್ಕಿದೆ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ದೊರೆತಿದ್ದು, ಸ್ಥಳಕ್ಕೆ ಲಕ್ಕುಂಡಿ ಪ್ರಾಧಿಕಾರದ ಸದಸ್ಯರು ಮತ್ತು ಪುರಾತತ್ವ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ದೊರೆತ ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ ನಂತರವೆ ತಿಳಿಯಲಿದೆ ಎಂದು ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಸ್ಯದಸ್ಯ ಸಿದ್ದು ಪಾಟೀಲ ತಿಳಿಸಿದ್ದಾರೆ