ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು 14 ಬೆಂಚಗಳನ್ನು ರಚಿಸಿದ್ದು ಗದಗ ಜಿಲ್ಲೆಯಲ್ಲಿ ಒಟ್ಟು 20,172 ವಿವಿಧ ಚಾಲ್ತಿ ಪ್ರಕರಣಗಳಿದ್ದು ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 3,261 ಪ್ರಕರಣಗಳನ್ನು ಗುರುತಿಸಿದ್ದು ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ ಎಂದರು.