ಗದಗ: ಮಾನವ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾಗದAತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾದಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡ್ರ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಬುಧವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಇವರುಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮನುಷ್ಯ ಜನಿಸಿದ ತಕ್ಷಣ ಬಹಳಷ್ಟು ಹಕ್ಕುಗಳನ್ನು ಪಡೆದುಕೊಳ್ಳುತ್ತಾನೆ. ಮಾನವ ಹಕ್ಕುಗಳು ಎಲ್ಲ ಮನುಷ್ಯರು ಜನಿಸಿದ ತಕ್ಷಣ ನೈಸರ್ಗಿಕವಾಗಿ ಬರುವ ಹಕ್ಕುಗಳಾಗಿವೆ ಮನುಷ್ಯನು ಜೀವಿಸುವ ಹಕ್ಕು , ಧರ್ಮ ಸ್ವಾತಂತ್ರö್ಯ ಹಕ್ಕು, ಸಮಾನತೆ ಹಕ್ಕು, ಸಂಚರಿಸುವ ಹಕ್ಕು, ಪ್ರಾಣ ರಕ್ಷಣೆ ಹಕ್ಕು, ಯೋಗ್ಯ ಪರಿಸರದ ಹಕ್ಕು , ಶಿಕ್ಷಣದ ಹಕ್ಕು ಇವುಗಳೆಲ್ಲ ಮಾನವ ಹಕ್ಕುಗಳಾಗಿರುತ್ತವೆ. ಬೇರೆಯವರ ಸ್ವಾತಂತ್ರ÷್ಯವನ್ನು ಹರಣ ಮಾಡುವ ಅಧಿಕಾರ ಯಾರಿಗೂ ಇರುವುದಿಲ್ಲ.ಮಾನವ ಹಕ್ಕುಗಳ ಉಲ್ಲಂಘನೆಯಾದಾಗ ಮಾನವ ಹಕ್ಕುಗಳ ಆಯೋಗಕ್ಕೆ ಲಿಖಿತವಾಗಿ ಅಥವಾ ಆನ್‌ಲೈನ್ ಮೂಲಕವಾದರೂ ದೂರು ನೀಡಬಹುದು ಎಂದರು.
ಕಾರಾಗೃಹದಲ್ಲಿ ಕೈದಿಗಳಿಗೆ, ಜೀತ ಪದ್ಧತಿ, ಭಯೋತ್ಪಾದನೆ, ಬಾಲ್ಯ ವಿವಾಹ ಇಂತಹ ಪ್ರಕರಣಗಳಲ್ಲ ಮಾನವ ಹಕ್ಕುಗಳ ಉಲ್ಲಂಘನೆಯಾಗುವ ಸಂಭವವಿರುತ್ತದೆ. ಕ್ರಿ.ಶ.1993 ರಲ್ಲಿ ನಮ್ಮ ದೇಶದಲ್ಲಿ ಮಾನವ ಹಕ್ಕುಗಳ ಆಯೋಗ ಸ್ಥಾಪನೆಯಾಯಿತು. ಮಾನವ ಹಕ್ಕುಗಳ ಉಲ್ಲಂಘನೆಯಾದಾಗ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಬಹುದು ಅಥವಾ ನ್ಯಾಯಾಲಯಕ್ಕೂ ದೂರು ನೀಡಬಹುದಾಗಿದೆ. ಮಾನವ ಹಕ್ಕುಗಳ ಆಯೋಗಕ್ಕೆ ಶಿಕ್ಷೆ ಕೊಡುವ ಅಧಿಕಾರವಿರುವುದಿಲ.್ಲ ಆಯೋಗವು ಸಂಬAಧಿತ ಇಲಾಖೆಯ ಅಧಿಕಾರಿಗಳಿಗೆ ವರದಿಯನ್ನು ಶಿಫಾರಸ್ಸು ಮಾಡುತ್ತದೆ ಎಂದರು.