ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಮಕೃಷ್ಣ ಯೋಗಾಶ್ರಮದ ಜಗದ್ಗುರು ಸ್ವಾಮಿ ಯೋಗೇಶ್ವರಾನಂದ ಸ್ವಾಮೀಜಿ, ಮನಸೂರ ಜ.ಡಾ.ಬಸವರಾಜ ದೇವರು ಸ್ವಾಮೀಜಿ ಸಾನ್ನಿಧ್ಯ ವಹಿಸುತ್ತಾರೆ. ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕೀರಪ್ಪ ಹೆಬಸೂರ ಅಧ್ಯಕ್ಷತೆ ವಹಿಸುವರು. ಹಾಲುಮತ ಭಾಸ್ಕರ ರಾಜ್ಯ ಕನಕ ಶ್ರೀ ಪ್ರಶಸ್ತಿ ಪುರಸ್ಕöÈತ ಡಾ.ಲಿಂಗದಾಳ ಹಾಲಪ್ಪ ಕಾರ್ಯಕ್ರಮ ಉದ್ಘಾಟನೆ ಮಾಡುವರು. ಕೆ.ಎಚ್.ಪಾಟೀಲ ಕಾಲೇಜ್ ಪ್ರಾಧ್ಯಾಪಕಿ ಡಾ.ಸುಧಾ ಕೌಜಗೇರಿ ಉಪನ್ಯಾಸ ನೀಡುವರು. ಹಸ್ತ ಪ್ರತಿ ಶಾಸ್ತç ಪ್ರಾಧ್ಯಾಪಕ ಪ್ರೊ.ಎಫ್.ಟಿ.ಹಳ್ಳಿಕೇರಿ, ಮಂಜುನಾಥ ಹೊನ್ನಣ್ಣವರ, ಡಾ.ಹನಮಗೌಡ ಪಾಟೀಲ, ವಾಸಣ್ಣ ಕುರಡಗಿ, ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ, ರವಿ ದಂಡಿನ, ಪ್ರಕಾಶ ಕರಿ, ಸುರೇಶ ಕೊಪ್ಪದ, ರಾಜಶೇಖರ ಕಲ್ಲೂರ, ಸಿದ್ಧಲಿಂಗ ಬಂಡು, ಆರ್.ಎಸ್.ಬುರಡಿ,ರಾಮಕೃಷ್ಣ ರೊಳ್ಳಿ ಸೇರಿದಂತೆ ಮುಂತಾದವರು ಬಾಗವಹಿಸುವರು ಎಂದರು.