ಮಾರ್ಚ್ ೧೧ ರಿಂದ ರಾಜ್ಯ ಸರ್ಕಾರಿ ವೈದ್ಯಾಧಿಕಾರಿ ಹಾಗೂ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಮಲ್ಲಿಕಾರ್ಜುನ ಬಳ್ಳಾರಿ

Gadag Pressmeet
Gadag Pressmeet
Published on
ಗದಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಇಲಾಖೆಯ ಎಲ್ಲಾ ವೃಂದ ಸಂಘಗಳ ಸಹಯೋಗದೊಂದಿಗೆ ಮಾರ್ಚ್ 11 ರಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.
ಶನಿವಾರ ನಗರದ ಪತ್ರಿಕಾ ಭವನದಲ್ಲಿ ಜರುಗಿದ ಸುದ್ದಿಘೋಷ್ಠಿಯಲ್ಲಿ ಮಾತನಾಡಿದ ಅವರು,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲ್ಲಾಖೆಯ ಅಧಿಕಾರಿ ಹಾಗೂ ನೌಕರರ ಪ್ರಮುಖ ಬೇಡಿಕೆಗಳಾದ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಸಮರ್ಪಕವಾಗಿ ಇಲಾಖೆಯಿಂದ ಔಷಧಿಗಳನ್ನು ಸರಬರಾಜು ಮಾಡುವುದು, ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ 3 ವರ್ಷಕ್ಕೊಮ್ಮೆ ತಿದ್ದುಪಡಿ ಮಾಡುವುದು, ಇಲಾಖೆಯ ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನು ಕಾಲ ಕಾಲಕ್ಕೆ ಪ್ರಕಟಿಸುವುದು,
ಎಲ್ಲಾ ವೃಂದದ ಯಾವುದೇ ಅಧಿಕಾರಿ-ನೌಕರರಿಗೆ ಮುಂಬಡ್ತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಗಾಗಲೇ ಹಲವಾರು ಬಾರಿ ಸರ್ಕಾರದ ಗಮನಕ್ಕೆ ತರಲಾಗಿದೆ ಇಷ್ಟಾದರೂ ಯಾವುದೇ ರೀತಿಯ ಕ್ರಮ ತೆಗೆದುಕೊಳ್ಳದ ಕಾರಣ ಮೊದಲ ಹಂತದಲ್ಲಿ ಮಾ. ೧೧ ರಿಂದ ೧೫ ರವರೆಗೆ ರಾಜ್ಯದ ಎಲ್ಲಾ ಜಿಲ್ಲಾ ತಾಲೂಕ ಆಸ್ಪತ್ರೆ,ಸಮುದಾಯ ಆರೋಗ್ಯ ಕೇಂದ್ರ,ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಲ್ಲ ವೈದ್ಯರು ನೌಕರರು ಕಪ್ಪು ಪಟ್ಟಿ ಧರಿಸಿ ಹೊರರೋಗಿಗಳ ಚಿಕಿತ್ಸೆ ಯನ್ನು ಸ್ಥಗಿತಗೊಳಿಸಿ ಮುಷ್ಕರದಲ್ಲಿ ಭಾಗವಹಿಸಲಾಗುವುದು ನಂತರ ಇದಕ್ಕೆ ಸರ್ಕಾರದ ನಿರ್ಧಾರವನ್ನು ಸ್ಪಷ್ಟ ಪಡಿಸದಿದಲ್ಲಿ ಮಾ. ೧೬ ರಿಂದ ಎಲ್ಲ ಆಸ್ಪತ್ರೆಗಳಲ್ಲಿ ತುರ್ತು ಸೇವೆಗಳನ್ನು ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿಗೆ ಗೈರು ಹಾಜರಾಗುವ ಮೂಲಕ ಮುಷ್ಕರ ಮುಂದುವರಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಬಸವರಾಜ ಬಳ್ಳಾರಿ ಮಾತನಾಡಿ, ರಾಜ್ಯ ಸರ್ಕಾರಿ ವೈದ್ಯಾಧಿಕಾರಿ ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೈಗೊಳ್ಳುವ ಮುಷ್ಕರಕ್ಕೆ ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವೈದ್ಯಾಧಿಕಾರಿ ಸಂಘದ ಜಿಲ್ಲಾಧ್ಯಕ್ಷ ಡಾ.ಶರಣು ಗಾಣಿಗೇರ, ಮಲ್ಲಿಕಾರ್ಜುನ ಕಲಾಕಂಬಿ, ಡಾ.ಅರುಣಪ್ರಸಾದ, ಅಜಯಕುಮಾರ ಕಲಾಲ, ಡಾ.ಪ್ರಲಾದ್ ಹೊಸಮನಿ, ರವಿ ಗುಂಜೀಕರ ಸೇರಿದಂತೆ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net