ಜಿಲ್ಲಾಧಿಕಾರಿ ಕಚೇರಿ ಎದುರು ರೈತರ ಬೃಹತ್​ ಪ್ರತಿಭಟನೆ

ಬೆಳೆವಿಮೆ ಬಿಡುಗಡೆಗೆ ಆಗ್ರಹಿಸಿ ಜಿಲ್ಲೆಯ ರೈತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್​ ಪ್ರತಿಭಟನೆ ಮಾಡಿದರು.
ಬೆಳೆವಿಮೆ ಬಿಡುಗಡೆಗೆ ಆಗ್ರಹಿಸಿ ಜಿಲ್ಲೆಯ ರೈತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್​ ಪ್ರತಿಭಟನೆ ಮಾಡಿದರು.
Published on

ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹ.
ಈ ಹಿಂದೆ ನಡೆದ ಟನೆಗೆ ಜಿಲ್ಲಾಧಿಕಾರಿಯಿಂದ ಕ್ಷಮೆಯಾಚನೆ


ವಿಜಯವಾಣಿ ಸುದ್ದಿಜಾಲ ಗದಗ
ಭೀಕರ ಬರದಿಂದ ತತ್ತರಿಸಿರುವ ಗದಗ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ಕಳೆದ ಸಾಲಿನ ಬೆಳೆ ವಿಮೆ ಹಾಗೂ ಬೆಳೆ ಹಾನಿ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಸಾವಿರಾರು ರೈತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್​ ಪ್ರತಿಭಟನೆ ನಡೆಸಿದರು.
ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್​ ಮೆರವಣಿಗೆ ನಡೆಸಿದ ರೈತರು, ನಂತರ ಜಿಲ್ಲಾಡಳಿತ ಭವನದ ಎದುರು ಧರಣಿ ನಡೆಸಿ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗದಗ ಜಿಲ್ಲೆಯ ಎಲ್ಲಏಳು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು. ಹೆಸರು, ಮೆಕ್ಕೆಜೋಳ, ಮೆಣಸಿನಕಾಯಿ ಸೇರಿದಂತೆ ವಿವಿಧ ಬೆಳೆಗಳು ಸಂರ್ಪೂಣ ಹಾನಿಗೊಳಗಾಗಿವೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಸರ್ಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳು ರೈತರ ಸಮಸ್ಯೆಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಬರ ಎದುರಾದರೂ ಸಹ ಕೃಷಿ ಇಲಾಖೆ ಜಿಲ್ಲೆಯಾದ್ಯಂತ ಇನ್ನೂ ಸಮಗ್ರ ಬೆಳೆ ಹಾನಿ ಸಮೀಕ್ಷೆ ನಡೆಸಿಲ್ಲ. ಕಳೆದ ವರ್ಷದ ಬೆಳೆ ವಿಮೆ ಹಾಗೂ ಪರಿಹಾರವೂ ಇನ್ನೂ ರೈತರ ಖಾತೆಗೆ ಜಮೆ ಆಗಿಲ್ಲ. ಇದರಿಂದ ರೈತರು ತೀವ್ರ ಆಥಿರ್ಕ ಸಂಕಷ್ಟ ಅನುಭವಿಸುತ್ತಿದ್ದು, ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಗೆ ಕಪ್ಪತ್ತಗುಡ್ಡ ನಂದಿವೇರಿ ಮಠದ ಶಿವಕುಮಾರ ಸ್ವಾಮೀಜಿ, ಬೈರನಟ್ಟಿ ದೊರೆಸ್ವಾಮಿ ಮಠದ ಶಾಂತಲಿಂಗ ಸ್ವಾಮೀಜಿ ಬೆಂಬಲ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ರೈತರು ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಕ್ಷಮೆಯಾಚನೆ:
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಸಿ. ಎನ್​. ಶ್ರೀದರ ಅವರು, ಕೆಲ ದಿನಗಳ ಹಿಂದೆ ಬೆಳೆವಿಮೆ ಕುರಿತು ಮನವಿ ಸಲ್ಲಿಸಲು ಬಂದ ರೈತರೊಂದಿಗೆ ನಡೆದ ಟನೆಯ ಕುರಿತು ವಿಷಾದ ವ್ಯಕ್ತಪಡಿಸಿ ರೈತರಲ್ಲಿ ಕ್ಷಮೆಯಾಚಿಸಿದರು. ಜಿಲ್ಲಾಧಿಕಾರಿಯ ಕ್ಷಮೆಯಾಚನೆಯ ನಂತರವೂ ರೈತರು ತಮ್ಮ ಪ್ರಮುಖ ಬೇಡಿಕೆಗಳಾದ ಗದಗ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸುವುದು, ಬಾಕಿ ಇರುವ ಬೆಳೆ ವಿಮೆ ಹಾಗೂ ಬೆಳೆ ಹಾನಿ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡುವುದು ಮತ್ತು ರೈತರ ಸಮಸ್ಯೆಗಳ ಕುರಿತು ಜಿಲ್ಲಾಡಳಿತ ಸ್ಪಂದಿಸಬೇಕು ಎಂದು ಆಗ್ರಹಿಸಿದರು.


.






ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net