ದೌರ್ಜನ್ಯ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ : ಜಿಲ್ಲಾಧಿಕಾರಿ ಸಿ. ಎನ್​. ಶ್ರೀಧರ್​

  ಗದಗ ಜಿಲ್ಲಾಡಳಿತ ಭವನದಲ್ಲಿ ಎಸ್ಸಿ ಎಸ್ಟಿ ದವರ್ಜನ್ಯ ತಡೆ ಕಾಯ್ದೆ ಕುರಿತು ಬುಧವಾರ ಸಭೆ ನಡೆಯಿತು. ರೋಹನ  ಜಗದೀಶ, ಮಹಾಂತೇಶ ಸಜ್ಜನ, ಬಸನಗೌಡ ಕೋಟೂರ, ಡಾ. ಎಸ್​. ಎಸ್​. ನೀಲಗುಂದ, ಆರ್​. ಎಸ್​. ಬುರುಡಿ, ರಾಧಾ ಮಣ್ಣೂರ, ನಂದಾ ಹಣಬರಟ್ಟಿ ಇದ್ದರು.
ಗದಗ ಜಿಲ್ಲಾಡಳಿತ ಭವನದಲ್ಲಿ ಎಸ್ಸಿ ಎಸ್ಟಿ ದವರ್ಜನ್ಯ ತಡೆ ಕಾಯ್ದೆ ಕುರಿತು ಬುಧವಾರ ಸಭೆ ನಡೆಯಿತು. ರೋಹನ ಜಗದೀಶ, ಮಹಾಂತೇಶ ಸಜ್ಜನ, ಬಸನಗೌಡ ಕೋಟೂರ, ಡಾ. ಎಸ್​. ಎಸ್​. ನೀಲಗುಂದ, ಆರ್​. ಎಸ್​. ಬುರುಡಿ, ರಾಧಾ ಮಣ್ಣೂರ, ನಂದಾ ಹಣಬರಟ್ಟಿ ಇದ್ದರು.
Published on
ವಿಜಯವಾಣಿ ಸುದ್ದಿಜಾಲ ಗದಗ
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕಾಗಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್​.ಶ್ರೀಧರ್​ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ಪಜಾ, ಪಪಂ ಜಿಲ್ಲಾ ಜಾಗೃತ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯ ಅಧ್ಯತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿನ ಪ್ರತಿಷ್ಟಿತ ಶಾಲೆಗಳಲ್ಲಿ ಪ್ರವೇಶಾತಿ ಹೊಂದಿರುವ ಪಜಾ ಹಾಗೂ ಪ.ಪಂಗಡದ ವಿದ್ಯಾಥಿರ್ಗಳಿಗೆ ಪಠ್ಯ ಹಾಗೂ ಪಠ್ಯೇತರ ವಿಷಯಗಳಲ್ಲಿ ಭಾಗವಹಿಸುವಂತೆ ಅವರನ್ನು ಪ್ರೋತ್ಸಾಹಿಸಬೇಕು. ಗುಣಮಟ್ಟದ ಶಿಣವನ್ನು ಶಾಲಾ ಮಕ್ಕಳಿಗೆ ನೀಡುವುದು ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು. ಪರಿಶಿಷ್ಟ ಸಮುದಾಯ ಕಾಲೋನಿಗಳಲ್ಲಿ ರಸ್ತೆ, ವಿದ್ಯುತ್​ ಪೂರೈಕೆ, ಸಮರ್ಪಕ ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಮೂಲಭೂತ ಸೌಕರ್ಯಗಳು ಒದಗುವಂತೆ ನೋಡಿಕೊಳ್ಳಬೇಕು. ಪಜಾ, ಪಪಂ ದೌರ್ಜನ್ಯ ಪ್ರಕರಣದಡಿ ಅರ್ಹ ಸಂತ್ರಸ್ಥರಿಗೆ ಪರಿಹಾರ ಧನ ಒದಗಿಸಲು ವಿಳಂಬ ಆಗಬಾರದು. ಅಧಿಕಾರಿಗಳು ಅರ್ಹರಿಗೆ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಪಜಾ, ಪಪಂ ಜನರಿಗೆ ತಲುಪಬೇಕಾದ ವಸತಿ. ವೈದ್ಯಕಿಯ ಶಿಣ ಸೇರಿದಂತೆ ವಿವಿಧ ಸೌಲಭ್ಯಗಳು ಅರ್ಹರಿಗೆ ಸಕಾಲದಲ್ಲಿಯೆ ದೊರಕಬೇಕು. ಲಾನುಭವಿಗಳ ಆಯ್ಕೆ ಪಟ್ಟಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು ಅಗತ್ಯವಾಗಿದೆ. ಯಾವುದೇ ಕಾರಣಕ್ಕೂ ಸೌಲಬ್ಯಗಳ ವಿತರಣೆಯಲ್ಲಿ ದುರುಪಯೋಗ ಆಗಬಾರದು. ಈ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ವಿಶೇಷ ಆಸಕ್ತಿಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ. ಎನ್​. ಶ್ರೀಧರ್​ ಕಟ್ಟುನಿಟ್ಟಿನ ಸೂಚನೆ ನೀಡಿದರು
ಸಭೆಯ ಆರಂಭದಲ್ಲಿ ಹಿಂದಿನ ಸಭೆಯ ಅನುಪಾಲನಾ ವರದಿಯನ್ನು ಸಭೆಯ ಮುಂದೆ ಮಂಡಿಸಲಾಯಿತು. ಜಿಲ್ಲಾ ಪೊಲೀಸ ವರಿಷ್ಠಾಕಾರಿ ರೋಹನ್​ ಜಗದೀಶ್​, ಡಿವೈಎಸ್​ಪಿ ಮಹಾಂತೇಶ ಸಜ್ಜನ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಡಿಎಚ್​ಒ ಡಾ. ಎಸ್​. ಎಸ್​. ನೀಲಗುಂದ, ಡಿಡಿಪಿಐ ಆರ್​. ಎಸ್​. ಬುರುಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net