ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ ಕಾರ್ಯಕ್ರಮ

ಗದಗನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ಸಿ.ಎನ್​. ಶ್ರೀಧರ, ಎ.ಎ. ಕಂಬಾಳಿಮಠ, ಸಿ. ಆರ್​. ಮುಂಡರಗಿ, ಗಂಗಪ್ಪ ಎಂ, ಡಾ. ಬಸವರಾಜ ಬಳ್ಳಾರಿ, ಡಾ. ನಂದಾ ಹಣಬರಹಟ್ಟಿ, ಆರ್​. ರುದ್ರಣ್ಣಗೌಡ, ಆರ್​. ಎಸ್​. ಬುರಡಿ, ಮೆಹಬೂಬ ತುಂಬರಮಟ್ಟಿ, ಅಮಿತ ಬಿದರಿ, ಡಾ. ಶರಣು ಗೊಗೇರಿ, ಕೊಟ್ರೇಶ್ವರ ವಿಭೂತಿ ಇತರರು ಇದ್ದರು.
ಗದಗನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ಸಿ.ಎನ್​. ಶ್ರೀಧರ, ಎ.ಎ. ಕಂಬಾಳಿಮಠ, ಸಿ. ಆರ್​. ಮುಂಡರಗಿ, ಗಂಗಪ್ಪ ಎಂ, ಡಾ. ಬಸವರಾಜ ಬಳ್ಳಾರಿ, ಡಾ. ನಂದಾ ಹಣಬರಹಟ್ಟಿ, ಆರ್​. ರುದ್ರಣ್ಣಗೌಡ, ಆರ್​. ಎಸ್​. ಬುರಡಿ, ಮೆಹಬೂಬ ತುಂಬರಮಟ್ಟಿ, ಅಮಿತ ಬಿದರಿ, ಡಾ. ಶರಣು ಗೊಗೇರಿ, ಕೊಟ್ರೇಶ್ವರ ವಿಭೂತಿ ಇತರರು ಇದ್ದರು.
Published on
ಜಿಲ್ಲಾಧಿಕಾರಿ ಸಿ. ಎನ್​. ಶ್ರೀಧರ ಅವರಿಂದ ಜಾಥಾಕ್ಕೆ ಚಾಲನೆ
ವಿಜಯವಾಣಿ ಸುದ್ದಿಜಾಳ ಗದಗ
ನಮ್ಮ ದೇಶವು ಜಗತ್ತಿನಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಇಲ್ಲಿ ದೇಶವನ್ನು ಮುನ್ನಡೆಸುವ ಮತ್ತು ಕಾನೂನು ರೂಪಿಸುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಪರಮಾಧಿಕಾರ ಇರುವುದು ಮತದಾರರಿಗೆ ಮಾತ್ರ. ಅರ್ಹ ಮತದಾರರು ಮತದಾನ ಪಟ್ಟಿಯಿಂದ ಹೊರಗೆ ಉಯಬಾರದು ಎಂದು ಜಿಲ್ಲಾ ಸ್ವೀಪ್​ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಸಿ. ಎನ್​. ಶ್ರೀಧರ ಹೇಳಿದರು.
ಜಿಲ್ಲಾಡಳಿತ ಭವನ, ಜಿಪಂ, ಜಿಲ್ಲಾ ಸ್ವಿಪ್​ ಸಮಿತಿ ಸಹಯೋಗದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026 ಅಂಗವಾಗಿ ಶುಕ್ರವಾರ ನಗರದ ಮುನ್ಸಿಪಲ್​ ಹೈಸ್ಕೂಲ ಆವರಣದಲ್ಲಿ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಮ್ಮ ದೇಶದ ನಿಯಮಾವಳಿಗಳ ಪ್ರಕಾರ ಪ್ರತಿ 10 ವರ್ಷಗಳಿಗೊಮ್ಮೆ ಮತದಾರರ ಪಟ್ಟಿಯನ್ನು ಸಂರ್ಪೂಣವಾಗಿ ಹೊಸದಾಗಿ ಸಿದ್ಧಪಡಿಸುವ ಪ್ರಕ್ರಿಯೆ ನಡೆಯುತ್ತದೆ. ಈ ಹಿಂದೆ ಇದ್ದ ಮತದಾರರು ಸದ್ಯ ಅದೇ ಸ್ಥಳದಲ್ಲಿದ್ದಾರೆಯೇ ಹೊಸದಾಗಿ ಯಾರೆಲ್ಲಾ ಸೇರ್ಪಡೆ ಆಗಬೇಕು ಎಂಬುದನ್ನು ಗುರುತಿಸಿ ದೃಢೀಕರಿಸುವ ಸಲುವಾಗಿ ಈ ವರ್ಷ ವಿಶೇಷ ಪರಿಷ್ಕರಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿರುವ ಅಧಿಕೃತ ಮತದಾರರ ನಿಖರವಾದ ದಾಖಲೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದರು.
ಮತದಾನದ ವಿಶೇಷ ಸಮಗ್ರ ಪರಿಷ್ಕರಣಾ ಪ್ರಕ್ರಿಯೇ ಈಗಾಗಲೇ ಜೂ. 30 ರಿಂದ ಎಲ್ಲ ಮತಗಟ್ಟೆಗಳ ಬೂತ್​ಮಟ್ಟದ ಅಧಿಕಾರಿಗಳು ಮತದಾರರ ಮನೆ ಮನೆಗೆ ಭೇಟಿ ನೀಡುವ ಮತ್ತು ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಕೈಗೊಳ್ಳುತ್ತಿದ್ದಾರೆ. ಸಾರ್ವಜನಿಕರಲ್ಲಿ ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲು ಮತ್ತು ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮಾಡಲು ಈ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸಾರ್ವಜನಿಕರು ಹಾಗೂ ಯುವ ಜನಾಂಗದವರು ತಮ್ಮ ಪೋಷಕರ, ಸಂಬಂಧಿಕರ ಹಾಗೂ ತಮ್ಮ ಪರಿಚಯದವರ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಎಂಬುದನ್ನು ಖಚಿತಪಡಿಸಿ ಕೊಳ್ಳಬೇಕು. ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿದಾಗ ಸೂಕ್ತ ಫಾರಂಗಳನ್ನು ಭತಿರ್ ಮಾಡಿ ನೀಡಿ, ಪ್ರಕ್ರಿಯೆಯನ್ನು ಯಶಸ್ವಿ ಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್​. ಶ್ರೀಧರ ಹೇಳಿದರು.
ಜಿಲ್ಲಾ ಪಂಚಾಯತ್​ ಮುಖ್ಯ ಯೋಜನಾಧಿಕಾರಿ ಹಾಗೂ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಿಲ್ಲಾ ನೋಡಲ್​ ಅಧಿಕಾರಿ ಎ. ಎ. ಕಂಬಾಳಿಮಠ ಮಾತನಾಡಿ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಅತ್ಯಂತ ಪ್ರಮುಖವಾಗಿದೆ. ಈ ಎಲ್ಲ ಚುನಾವಣೆಗಳು ಮತದಾರರ ಪಟ್ಟಿಯ ಆಧಾರದ ಮೇಲೆಯೇ ನಡೆಯುತ್ತವೆ. ಹಾಗಾಗಿ ಅರ್ಹ ಮತದಾರರನ್ನು ಒಳಗೊಂಡ ನಿಖರವಾದ ಪಟ್ಟಿಯನ್ನು ಸಿದ್ಧಪಡಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ ಎಂದರು.
ಪ್ರತಿ ವರ್ಷ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತದೆ. ಈ ಬಾರಿ ವಿಶೇಷವಾಗಿ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಮುಖ್ಯವಾಗಿ 2002 ರ ಮತದಾರರ ಪಟ್ಟಿಯಲ್ಲಿದ್ದ ದಾಖಲೆಗಳನ್ನು ಆಧರಿಸಿ, ಅಂದಿನ ಮತದಾರರು ಈಗಲೂ ಇದ್ದಾರೆಯೇ ಅವರು ಯಾವ ಬೂತ್​ ವ್ಯಾಪ್ತಿಯಲ್ಲಿ ಮತ ಚಲಾಸುಸುತ್ತಿದ್ದರು ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ. ಈ ಮೂಲಕ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಅತ್ಯಂತ ಪಾರದರ್ಶಕವಾದ ಮತ್ತು ನಿಖರವಾದ ಹೊಸ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಈ ವಿಶೇಷ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದರು.
ಮತದಾನ ಮಾಡುವುದು ನಮ್ಮೆಲ್ಲರ ಪವಿತ್ರವಾದ ಹಕ್ಕಾಗಿದೆ. ಈ ನಿಟ್ಟಿನಲ್ಲಿ ಅರ್ಹರೆಲ್ಲರೂ ಮತದಾರರ ಪಟ್ಟಿಗೆ ಸೇರ್ಪಡೆಯಾಗುವಂತೆ ಜಾಗೃತಿ ಮೂಡಿಸುವ ದೊಡ್ಡ ಜವಾಬ್ದಾರಿ ನಮ್ಮಲ್ಲರ ಮೇಲಿದೆ. ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು ಮೂಡಿಸುವ ಸಲುವಾಗಿಯೇ ಈ ವಿಶೇಷ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಂಬಾಳಿಮಠ ಹೇಳಿದರು.
ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದಶಿರ್ ಸಿ. ಆರ್​. ಮುಂಡರಗಿ, ಉಪ ವಿಭಾಗಾಧಿಕಾರಿ ಗಂಗಪ್ಪ ಎಂ, ಕನ್ನಡ ಮತ್ತು ಸಂಸತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಡಾ. ನಂದಾ ಹಣಬರಹಟ್ಟಿ, ಡಿಡಿಎಲ್​ ಆರ್​ ರುದ್ರಣ್ಣಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಆರ್​. ಎಸ್​. ಬುರಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮೆಹಬೂಬ ತುಂಬರಮಟ್ಟಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಅಮಿತ ಬಿದರಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೊಗೇರಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ ಇತರರು ಇದ್ದರು.
ಜನಜಾಗೃತಿ ರ್ಯಾಲಿ, ವಾಕ್​ಥಾನ್​ ನಗರದ ಮುನ್ಸಿಪಲ್​ ಹೈಸ್ಕೂಲ್​ನಿಂದ ಪ್ರಾರಂಭವಾಗಿ ಗಾಂಧಿ ಸರ್ಕಲ್​, ಮಹೇಂದ್ರಕರ ಸರ್ಕಲ್​, ಟಾಂಗಾ ಕೂಟ, ಬಸವೇಶ್ವರ ಸರ್ಕಲ್​, ಜೋಡು ಮಾರುತಿ ರಸ್ತೆ, ನಂತರ ಮುಳಗುಂದ ನಾಕಾದವರೆಗೆ ಬಂದು ಮುಕ್ತಾಯವಾಗೊಂಡಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net