ಎಸ್​ಐಆರ್​ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ ಕಲಾಕೃತಿಗಳು

  ಜಿಲ್ಲಾಡಳಿತ ಭವನದಲ್ಲಿ ವಿವಿಧ ಕಲಾಕೃತಿಗಳನ್ನು ಚಿತ್ರಿಸುವ ಮೂಲಕ ಎಸ್​ಐಆರ್​ ಜಾಗೃತಿ ಮೂಡಿಸಲಾಯಿತು.
ಜಿಲ್ಲಾಡಳಿತ ಭವನದಲ್ಲಿ ವಿವಿಧ ಕಲಾಕೃತಿಗಳನ್ನು ಚಿತ್ರಿಸುವ ಮೂಲಕ ಎಸ್​ಐಆರ್​ ಜಾಗೃತಿ ಮೂಡಿಸಲಾಯಿತು.
Published on
ವಿಜಯವಾಣಿ ಸುದ್ದಿಜಾಲ ಗದಗ
ಗದಗ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್​ಐಆರ್​)2026ರ ಅಂಗವಾಗಿ ಸಾರ್ವಜನಿಕರಲ್ಲಿ ಮತದಾನದ ಹಕ್ಕು, ಜವಾಬ್ದಾರಿ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ವಿಶೇಷ ಚಿತ್ರಕಲಾ ಪ್ರದರ್ಶನ ಆಯೋಜಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​, ಜಿಲ್ಲಾ ಸ್ವೀಪ್​ ಸಮಿತಿ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸದೃಢ ಪ್ರಜಾಪ್ರಭೂತ್ವ ನಿರ್ಮಾಣಕ್ಕೆ ಪ್ರತಿಯೊಬ್ಬ ಮತದಾರನ ಸಕ್ರಿಯ ಪಾಲ್ಗೊಳ್ಳುವಿಕೆ ಅತ್ಯಗತ್ಯ ಎಂಬ ಸಂದೇಶವನ್ನು ಚಿತ್ರಗಳ ಮೂಲಕ ಪರಿಣಾಮಕಾರಿಯಾಗಿ ಬಿಂಬಿಸಲಾಯಿತು.
ಸಮಾಜ ಕಲ್ಯಾಣ ಇಲಾಝಖೆಯ ಉಪನಿರ್ದೇಶಕಿ ಹಾಗೂ -ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯೂ ಆಗಿರುವ ಡಾ. ನಂದಾ ಹಣಬರಟ್ಟಿ ಅವರು ಸ್ವತಃ ರಚಿಸಿದ ಸಾಮಾಜಿಕ ಜಾಗೃತಿ ಮತ್ತು ಮತದಾನದ ಮಹತ್ವ ಸಾರುವ ಚಿತ್ರಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಎಸ್​ಐಆರ್​ ಪ್ರಕ್ರಿಯೆ, ಮತದಾರರ ನೋಂದಣಿ, ಮತದಾನದ ಹಕ್ಕಿನ ಮಹತ್ವ ಹಾಗೂ ಜಾಗೃತ ನಾಗರಿಕನ ಕರ್ತವ್ಯವನ್ನು ಪ್ರತಿಬಿಂಬಿಸುವ ಕಲಾಕೃತಿಗಳು ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಸಾರ್ವಜನಿಕರು ಹಾಗೂ ಅಧಿಕಾರಿಗಳ ಮೆಚ್ಚುಗೆಗೆ ಪಾತ್ರವಾದವು.
ಚಿತ್ರಕಲಾ ಪ್ರದರ್ಶನವನ್ನು ವೀಕ್ಷಿಸಿದ ಜಿಲ್ಲಾಧಿಕಾರಿ ಸಿ. ಎನ್​. ಶ್ರೀಧರ ಅವರು, ಸಾಮಾಜಿಕ ಸಂದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಚಿತ್ರಕಲೆಯಂತಹ ಸೃಜನಾತ್ಮಕ ಮಾಧ್ಯಮಗಳು ಪರಿಣಾಮಕಾರಿ ಪಾತ್ರ ವಹಿಸುತ್ತವೆ ಎಂದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿಗಳು ಕೈಗೊಂಡಿರುವ ಈ ವಿನೂತನ ಪ್ರಯತ್ನವನ್ನು ಶ್ಲಾಘಿಸಿದರು.
ಎಸ್​ಐಆರ್​ 2026ರ ಯಶಸ್ವಿ ಅನುಷ್ಠಾನಕ್ಕಾಗಿ ಸಾರ್ವಜನಿಕರು ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಹಾಗೂ ಅಗತ್ಯ ಮಾಹಿತಿಯನ್ನು ಸಲ್ಲಿಸಿ ಪ್ರಜಾಪ್ರಭೂತ್ವವನ್ನು ಮತ್ತಷ್ಟು ಸದೃಢಗೊಳಿಸುವಂತೆ ಅಧಿಕಾರಿಗಳು ಕರೆ ನೀಡಿದರು.
ಅಪರ ಜಿಲ್ಲಾಧಿಕಾರಿ ದುರಗೇಶ ಕೆ. ಆರ್​., ಜಿ ಪಂ ಮುಖ್ಯ ಯೋಜನಾಧಿಕಾರಿ ಎ. ಎ. ಕಂಬಾಳಿಮಠ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಎಂ. ವಿ. ಚಳಗೇರಿ, ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net