ಇತ್ತೀಚೆಗೆ ನಗರದ ಹೊರವಲಯದಲ್ಲಿ ಇರುವ ಗ್ರಾಮೀಣಾಭಿವೃದ್ಧಿ ವಿವಿ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಇದೀಗ ಈ ಪ್ರಕರಣ ನಗರಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂದು ಹೇಳುಲಾಗುತ್ತಿದೆಯಾದರೂ, ಯುವತಿಯ ಶವದ ಮೇಲೆ ಕಂಡು ಬಂದ ಗಾಯಗಳು ಪೋಷಕರನ್ನು ಹಲವು ಅನುಮಾನಕ್ಕೆ ದೂಡಿವೆ. ಇದೇ ಅನುಮಾನವನ್ನು ಪೊಲೀಸ್ ಇಲಾಖೆಯು ವ್ಯಕ್ತಪಡಿಸಿದ್ದು, ಆತ್ಮಹತ್ಯೆಯೋ? ಅಥವಾ ಕೊಲೆಯೋ? ಎಂಬುದರ ಬಗ್ಗೆ ಯಾವುದೇ ಪ್ರಭಾವಕ್ಕೆ ಒಳಗಾಗದೇ ಪೊಲೀಸ್ ಇಲಾಖೆ ಪಾರದರ್ಶಕ ತನಿಖೆ ಮಾಡಿದರಷ್ಟೇ ಸತ್ಯಾಂಶ ಹೊರ ಬರಲಿದೆ.