ಕಾಂಗ್ರೆಸ್ ಜಿಲ್ಲಾ ಟಕಗಳ ಅಧ್ಯಕ್ಷರ ಆಯ್ಕೆಯಲ್ಲಿ ಶೇ. 50ರಷ್ಟು ಯುವಜನರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಎಐಸಿಸಿ ಕಾರ್ಯದಶಿರ್ ಹಾಗೂ ಪಕ್ಷದ ಗದಗ ಜಿಲ್ಲಾ ವೀಕ್ಷಕ ವಿವೇಕ್ ಬನ್ಸಾಲ ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜಿಲ್ಲಾ ಟಕದ ಅಧ್ಯಕ್ಷರಾಗುವವರು ಕನಿಷ್ಠ ಐದು ವರ್ಷ ಕಾಂಗ್ರೆಸ್ ಪಕ್ಷದಲ್ಲಿರಬೇಕು ಎಂಬ ನಿಯಮವಿದೆ. ಇದರೊಂದಿಗೆ ಯುವಜನರು, ಮಹಿಳೆಯರು, ದಲಿತರ ಪ್ರಾತಿನಿಧ್ಯವನ್ನೂ ಪರಿಗಣಿಸಲಾಗುತ್ತದೆ. ಕಾಂಗ್ರೆಸ್ ಸಂಟನೆ, ಸಶಕ್ತೀಕರಣದ ಉದ್ದೇಶದಿಂದ ಸಂಟನಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಟಕದ ಅಧ್ಯಕ್ಷ ಸ್ಥಾನಕ್ಕೆ ಆರು ಜನರ ಹೆಸರನ್ನು ಪ್ರಸ್ತಾಪಿಸಲಾಗಿದೆ. ಇವರ ಬಗ್ಗೆ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದರು.
ನೀಟ್ ಪ್ರಶ್ನೆಪತ್ರಿಕೆಗಳ ಸೋರಿಕೆ ವಿರುದ್ಧ ಜೆನ್ ಜಿ&ಗಳು ನಡೆಸಿದ ಹೋರಾಟದ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮೊದಲು ಧ್ವನಿ ಎತ್ತಿದರು. ಈ ಹೋರಾಟದ ಪರಿಣಾಮ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡುವಂತಾಗಿದೆ. ಯುವಜನರು ದೇಶದ ಸಂಪತ್ತು ಆಗಿದ್ದಾರೆ ಎಂದರು.
ಕೇಂದ್ರ ಸರ್ಕಾರ ನೀಡಿದ್ದ ಉದ್ಯೋಗ ಸೃಷ್ಟಿಯ ಭರವಸೆ ಹುಸಿಯಾಗಿದೆ. ಇದರಿಂದ ಯುವಜನತೆ ಪರಿತಪಿಸುತ್ತಿದ್ದಾರೆ. ವಿದೇಶಾಂಗ, ಆಥಿರ್ಕ ಪರಿಸ್ಥಿತಿ ಚಿಂತಾಜನಕವಾಗಿದೆ. ದೇಶ ಮುನ್ನಡೆಸಲಾಗದ ಕೇಂದ್ರ ಸರ್ಕಾರ, ಕಾಂಗ್ರೆಸ್ ವಿರುದ್ದ ಷಡ್ಯಂತ್ರ ರೂಪಿಸುತ್ತಿದೆ ಎಂದು ಆರೋಪಿಸಿದರು.
ಮಾಜಿ ಶಾಸಕ ಮಲ್ಲಿಕಾರ್ಜುನ ಅಕ್ಕಿ, ಕೆಪಿಸಿಸಿ ಕಾರ್ಯದಶಿರ್ ಸತೀಶ ಮೆಹರವಾಡೆ, ರಾಬರ್ಟ ದದ್ದಾಪುರಿ, ಮಾಜಿ ಶಾಸಕ ಡಿ.ಆರ್. ಪಾಟೀಲ, ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ, ಸಿದ್ದು ಪಾಟೀಲ ಇತರರು ಇದ್ದರು.