ಕನ್ನಡದಲ್ಲಿಯೇ ಟಿಇಟಿ ಪರೀಕ್ಷೆಗೆ ಅವಕಾಶ ನೀಡುವಂತೆ ಒತ್ತಾಯ

ಕನ್ನಡದಲ್ಲಿ ಟಿಇಟಿ ಪರೀಕ್ಷೆಗೆ ಅವಕಾಶ ನೀಡುವಂತೆ ಒತ್ತಾಯ
ಕನ್ನಡದಲ್ಲಿ ಟಿಇಟಿ ಪರೀಕ್ಷೆಗೆ ಅವಕಾಶ ನೀಡುವಂತೆ ಒತ್ತಾಯ
Published on

ಪ್ರಮುಖ ಮುಖ್ಯಾಂಶಗಳು

  • ಕನ್ನಡದಲ್ಲಿ ಟಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಒತ್ತಾಯ
  • ಮರಾಠಿಯಲ್ಲಿ ಟಿಇಟಿ ಪರೀಕ್ಷೆ ಬರೆಯ ಮಹಾ ನಿಯಮಕ್ಕೆ ಆಕ್ಷೇಪ
  • ಮಹಾ ನಿಯಮ ಬದಲಿಸುವಂತೆ ಒತ್ತಾಯ
  • ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ
  • ಗಡಿ ಕನ್ನಡಿಗರ ಹಕ್ಕು ರಕ್ಷಣೆಗೆ ಒತ್ತಾಯ

ಕನ್ನಡದಲ್ಲಿ ಟಿಇಟಿ ಪರೀಕ್ಷೆಗೆ ಅವಕಾಶ ನೀಡುವಂತೆ ಒತ್ತಾಯ
| ಮಹಾರಾಷ್ಟ್ರ ಸರ್ಕಾರದ ಆದೇಶಕ್ಕೆ ಖಂಡನೆ
ವಿಜಯವಾಣಿ ಸುದ್ದಿಜಾಲ ಬೆಳಗಾವಿ:

ಮಹಾರಾಷ್ಟದಲ್ಲಿರುವ ಕನ್ನಡ ಭಾಷಿಕ ಶಿಕ್ಷಕರಿಗೆ ಟಿಇಟಿ ಪರೀಕ್ಷೆಯನ್ನು ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಕಾರ್ಯಕರ್ತರು ಮಂಗಳವಾರ ಪ್ರಾದೇಶಿಕ ಆಯುಕ್ತೆ ಜಾನಕಿ.ಕೆ.ಎಂ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮಹಾರಾಷ್ಟ್ರ ಸರ್ಕಾರವು ಕನ್ನಡ ಭಾಷಿಕ ಶಿಕ್ಷಕರಿಗೆ ಮರಾಠಿ ಭಾಷೆಯಲ್ಲಿಯೇ ಟಿಇಟಿ ಪರೀಕ್ಷೆ ಬರೆಯುವಂತೆ ನಿಯಮ ರೂಪಿಸುವುದು ಖಂಡನೀಯ. ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ(ಎನ್‌ಟಿಐಸಿ)ಮಾರ್ಗಸೂಚಿಗಳ ಪ್ರಕಾರ ಶಿಕ್ಷಕರ ಅರ್ಹತಾ ಪರೀಕ್ಷೆ ಅಭ್ಯರ್ಥಿಗಳ ಮಾತೃಭಾಷೆಯಲ್ಲಿ ನಡೆಸಲು ಅವಕಾಶ ಕಲ್ಪಿಸಬೇಕು. ಆದರೆ,ಮಹಾರಾಷ್ಟ್ರ ಸರ್ಕಾರ ಕನ್ನಡ ಮಾಧ್ಯಮ ಶಿಕ್ಷಕರಿಗೂ ಕಡ್ಡಾಯವಾಗಿ ಮರಾಠಿ ಭಾಷೆಯಲ್ಲಿ ಪರೀಕ್ಷೆ ಬರೆಯುವಂತೆ ನಿಯಮ ಜಾರಿಗೊಳಿಸಿರುವುದು ಕನ್ನಡ ಭಾಷಿಕ ಶಿಕ್ಷಕರ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟç ಸರ್ಕಾರ ಎಲ್ಲ ಸರ್ಕಾರಿ ನೇಮಕಾತಿಯಲ್ಲಿ ಕನ್ನಡಿಗರಿಗೆ ಮಾತೃಭಾಷೆಯಲ್ಲಿ ಪರೀಕ್ಷೆ ಅವಕಾಶ ನೀಡುವಂತೆ ಕರ್ನಾಟಕ ರಾಜ್ಯ ಸರ್ಕಾರ ಮಹಾರಾಷ್ಟ್ರ ಸರ್ಕಾರದ ಜತೆ ಮಾತನಾಡಿ ಸಮಸ್ಯೆಗೆ ಪರಿಹಾರ. ಇಲ್ಲವಾದರೇ ಕರವೇ ರಾಜ್ಯಾದ್ಯಂತ ಹೋರಾಟ ನಡೆಸಲಾಯಿತು ಎಂದು ಪ್ರತಿಭಟನಾಕಾರರು ಮನವಿ ಮೂಲಕ ಎಚ್ಚರಿಕೆ ನೀಡಿದರು.
ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಮಾತನಾಡಿ ಮರಾಠಿಯಲ್ಲಿ ಪರೀಕ್ಷೆ ಬರೆಯುವ ಅನಿವಾರ್ಯತೆಯಿಂದ ಅನೇಕ ಅರ್ಹ ಹಾಗೂ ಅನುಭವೀ ಕನ್ನಡ ಶಿಕ್ಷಕರು ಪರೀಕ್ಷೆಯಲ್ಲಿ ಉತ್ತರರಾಗಲು ಸಾಧ್ಯವಾಗುತ್ತಿಲ್ಲ. ಜೊತೆಗೆ ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ಶಿಕ್ಷಕರ ಉದ್ಯೋಗ ಕಳೆದುಕೊಳ್ಲುವ ಭೀತಿ ಎದುರಿಸುತ್ತಿದೆ. ಗಡಿಭಾಗದ ಕನ್ನಡ ಶಿಕ್ಷಕರ ಉದ್ಯೋಗ ಭದ್ರತೆ, ಕನ್ನಡ ಭಾಷಿಕ ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕುಗಳ ಸಂರಕ್ಷಣೆಗಾಗಿ ಕರ್ನಾಟಕ ಸರ್ಕಾರವು ಆಡಳಿತಾತ್ಮಕ ಕ್ರಮಗಳನ್ನು ಕೈಗೊಂಡು,ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಗಣೇಶ ರೋಕಡೆ, ಸುರೇಶ ಗವನ್ನವರ,ಹೊಳೆಪ್ಪ ಸುಳದಾಳ,ಬಸವರಾಜ ಧೂಳಪ್ಪಗೋಳ,ಮಧು ಇಟಗಿ,ತೃಪ್ತಿ ಹಿರೇಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net