ನೀರಿನ ಪೈಪ್ಲೈನ್ ಸೂಕ್ತ ಜಾಗಕ್ಕೆ ಸ್ಥಳಾಂತರಿಸುತ್ತಿರುವ ನಗರಸಭೆಯು ಇಲ್ಲಿನ ತ್ಯಾಜ್ಯವನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಜಕಾಲುವೆ ಪಕ್ಕದಲ್ಲೇ ಕೋಳಿ ಮಾರುಕಟ್ಟೆ ಇರುವ ಕಾರಣದಿಂದ ರಕ್ತ ಮತ್ತು ಮಾಂಸದ ತ್ಯಾಜ್ಯವನ್ನು ನೇರವಾಗಿ ಕಾಲುವೆಗೆ ಎಸೆಯಲಾಗುತ್ತಿದೆ. ಈ ಪ್ರಕ್ರಿಯೆ ಇಲ್ಲಿನ ಇಡೀ ಪ್ರದೇಶವನ್ನು ರೋಗಗಳ ತಾಣವನ್ನಾಗಿ ಮಾಡುತ್ತಿದೆ. ಕೂಡಲೇ ಈ ತ್ಯಾಜ್ಯವನ್ನು ಜನವಸತಿ ಇಲ್ಲದ ದೂರದ ಜಾಗದಲ್ಲಿ ವಿಲೇವಾರಿ ಮಾಡಲು ಅಧಿಕಾರಿಗಳು ಆದೇಶಿಸಬೇಕು. ರಾಜಕಾಲುವೆ ಪಕ್ಕದ ರಸ್ತೆಯ ಮಣ್ಣು ಕುಸಿಯುತ್ತಿದ್ದು, ಪ್ರತಿದಿನ ಸಂಚರಿಸುವ ಶಾಲಾ ಮಕ್ಕಳು ಹಾಗೂ ಜನಸಾಮಾನ್ಯರಿಗೆ ಇದು ಮೃತ್ಯುಕೂಪವಾಗಿ ಪರಿಣಮಿಸಿದೆ. ಪೈಪ್ಲೈನ್ ಸ್ಥಳಾಂತರದ ನಂತರ ಈ ರಸ್ತೆಯನ್ನು ವೈಜ್ಞಾನಿಕವಾಗಿ ದುರಸ್ತಿಗೊಳಿಸಿ, ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜನರು ಆಗ್ರಹಿಸಿದ್ದಾರೆ. ರಾಜಕಾಲುವೆಯಲ್ಲಿ ಕಸ ಎಸೆಯುವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಮತ್ತು ನಗರಸಭೆ ಈ ಭಾಗದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜನರು ಒತ್ತಾಯಿದ್ದಾರೆ.