ಕಲಬುರಗಿ: ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ಸಂಬಂಧಿತ ಅವಡ ಸಂಭವ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜೆಸ್ಕಾಂ ವ್ಯಾಪ್ತಿಯ ಎಲ್ಲಾ ಇಂಜಿನಿಯರ್ಗಳು ಹಾಗೂ ಅಧಿಕಾರಿಗಳು ಅತ್ಯಂತ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಜೆಸ್ಕಾಂ ಅಧ್ಯ ಪ್ರವಿಣ್ ಪಾಟೀಲ್ ಹರವಾಳ್ ಸೂಚಿಸಿದ್ದಾರೆ.
ಮಳೆ ಮತ್ತು ಗಾಳಿಯಿಂದ ವಿದ್ಯುತ್ ತಂತಿಗಳು ಹರಿದು ಬೀಳುವುದು, ವಿದ್ಯುತ್ ಕಂಬಗಳು ಹಾನಿಗೊಳಗಾಗುವುದು ಹಾಗೂ ವಿದ್ಯುತ್ ವ್ಯತ್ಯಯ ಉಂಟಾಗುವ ಸಂಭವ ಹೆಚ್ಚಿದ್ದು, ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ವಿದ್ಯುತ್ ಲೈನ್ಗಳ ನಿರಂತರ ಪರಿಶೀಲನೆ, ದುರ್ಬಲ ತಂತಿಗಳು ಹಾಗೂ ಕಂಬಗಳ ತಣದ ದುರಸ್ತಿ ಮತ್ತು ತುರ್ತು ಪರಿಸ್ಥಿತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ವಿಳಂಬ ಕಂಡುಬಂದಲ್ಲಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ವಿದ್ಯುತ್ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಹಾಗೂ ತುರ್ತು ಪರಿಸ್ಥಿತಿಗೆ ತಣ ಸ್ಪಂದಿಸುವ ಉದ್ದೇಶದಿಂದ ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮರ್ಗಳು ಮತ್ತು ವಿದ್ಯುತ್ ತಂತಿಗಳ ಸಮರ್ಪಕ ಸ್ಟಾಕ್ ಅನ್ನು ಕಡ್ಡಾಯವಾಗಿ ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಸಾರ್ವಜನಿಕರ ಸುರತೆ ಹಾಗೂ ನಿರಂತರ ವಿದ್ಯುತ್ ಸರಬರಾಜು ಖಚಿತಪಡಿಸಿಕೊಳ್ಳುವುದು ಇಲಾಖೆಯ ಪ್ರಮುಖ ಗುರಿ. ಈ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತಿದೆ. ಮಳೆಗಾಲದ ಅವಧಿಯಲ್ಲಿ ಯಾವುದೇ ವಿಧದ ವಿದ್ಯುತ್ ಅವಡ ತಪ್ಪಿಸಲು ಶೂನ್ಯ ಸಹಿಷ್ಣುತೆ ನೀತಿ ಅನುಸರಿಸುವಂತೆ ತಿಳಿಸಿದ್ದಾರೆ.
ಸಾರ್ವಜನಿಕರು ಹರಿದು ಬಿದ್ದಿರುವ ವಿದ್ಯುತ್ ತಂತಿಗಳಿಂದ ಸುರತ ಅಂತರ ಕಾಯ್ದುಕೊಂಡು ಅವುಗಳನ್ನು ಯಾವುದೇ ಕಾರಣಕ್ಕೂ ಸ್ಪರ್ಶಿಸಬಾರದು. ವಿದ್ಯುತ್ ಸಂಬಂಧಿತ ಅವಡ ಅಥವಾ ಅಪಾಯಕರ ಪರಿಸ್ಥಿತಿ ಕಂಡುಬಂದಲ್ಲಿ ತಣವೇ ಸಮೀಪದ ಜೆಸ್ಕಾಂ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 1912 ಗೆ ಮಾಹಿತಿ ನೀಡುವಂತೆ ಕೋರಿದ್ದಾರೆ.