ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಜ್ಜಾಗಿ

ಹನೂರಿನ ಶ್ರೀ ವಿವೇಕಾನಂದ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ಪಾಲಕರು.
ಹನೂರಿನ ಶ್ರೀ ವಿವೇಕಾನಂದ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ಪಾಲಕರು.
Published on
ಹನೂರು: ಪ್ರತಿಯೊಬ್ಬರೂ ಶ್ರದ್ಧೆಯಿಂದ ಓದಿನ ಕಡೆಗೆ ಹೆಚ್ಚಿನ ಗಮನ ನೀಡುವ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜಾಗಬೇಕು ಎಂದು ಹುಣಸೂರು ಸರ್ಕಾರಿ ಕಾಲೇಜಿನ ಉಪನ್ಯಾಸಕ ಎಚ್.ಎನ್.ಗಿರೀಶ್ ಸಲಹೆ ನೀಡಿದರು.

ಪಟ್ಟಣದ ಶ್ರೀ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ 2026-27ನೇ ಸಾಲಿನ ಸಿಇಟಿ, ಎನ್‌ಇಇಟಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಂದಿನ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಪಡೆಯಬೇಕಾದರೆ ಹೆಚ್ಚು ಶ್ರಮಿಸಬೇಕಿದೆ. ಆದ್ದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈಗಿನಿಂದಲೇ ಸಜ್ಜಾಗಬೇಕು. ಇನ್ನು ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬೇಕಾದರೆ ರಾಷ್ಟ ಮಟ್ಟದ ಪರೀಕ್ಷೆಯನ್ನು ಎದುರಿಸಬೇಕಿದೆ. ಆದ್ದರಿಂದ ಪ್ರತಿಯೊಬ್ಬರೂ ಸ್ಪರ್ಧಾತ್ಮಕ ಪರೀಕ್ಷೆ ದೃಷ್ಠಿಯಿಂದ ಓದಿನತ್ತ ಗಮನಹರಿಸಬೇಕು. ಪಾಲಕರು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಬೇಕು ಎಂದು ತಿಳಿಸಿದರು.

ಇದೇ ವೇಳೆ ನೀಟ್ ಪರೀಕ್ಷೆ ಬಗ್ಗೆ ಸಮಗ್ರ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕ ರಾಜೇಂದ್ರನ್, ಪ್ರಾಂಶುಪಾಲ ಮಧುಸೂದನ್, ಮುಖ್ಯ ಶಿಕ್ಷಕ ಸತ್ಯಪ್ರಿಯ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net