ಹದಗೆಟ್ಟ ರಸ್ತೆ ದುರಸ್ತಿಗೆ ಮಾಡಿಸಿರಿ

ರಸ್ತೆಗಳ ಗುಂಡಿ ಮುಚ್ಚುವಂತೆ ಒತ್ತಾಯಿಸಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸಿದ್ದಾಪುರ ಗ್ರಾಮ ಪಂಚಾಯಿತಿ ಮನವಿ ಸಲ್ಲಿಸಲಾಯಿತು. ಅನಿಲ್ ಶೆಟ್ಟಿ, ಹರಿದಾಸ್ ಇತರರು ಇದ್ದರು.
ರಸ್ತೆಗಳ ಗುಂಡಿ ಮುಚ್ಚುವಂತೆ ಒತ್ತಾಯಿಸಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸಿದ್ದಾಪುರ ಗ್ರಾಮ ಪಂಚಾಯಿತಿ ಮನವಿ ಸಲ್ಲಿಸಲಾಯಿತು. ಅನಿಲ್ ಶೆಟ್ಟಿ, ಹರಿದಾಸ್ ಇತರರು ಇದ್ದರು.
Published on

ಸಿದ್ದಾಪುರ:

ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹದಗೆಟ್ಟ ರಸ್ತೆಗಳ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ಒತ್ತಾಯಿಸಿ ಸಿದ್ದಾಪುರ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಗ್ರಾಮ ಪಂಚಾಯಿತಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.


ಈ ವೇಳೆ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ರೂಪೇಶ್ ಮಾತನಾಡಿ, ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಹ್ಯ, ಕಕ್ಕಟಕಾಡು, ಕೂಡುಗದ್ದೆ, ಕರಡಿಗೋಡು ಹಾಗೂ ಸಿದ್ದಾಪುರ ನಗರದಿಂದ ನೆಲ್ಯಹುದಿಕೇರಿಗೆ ತೆರಳುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಅಲ್ಲಲ್ಲಿ ದೊಡ್ಡ ಗುಂಡಿಗಳು ನಿರ್ಮಾಣಗೊಂಡಿವೆ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ರಸ್ತೆಗಳ ಗುಂಡಿಗಳನ್ನು ಮುಚ್ಚಿ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಪಂಚಾಯಿತಿಗೆ ಮನವಿ ಮಾಡಲಾಗಿದೆ ಎಂದರು.


ಮನವಿಗೆ ಸ್ಪಂದಿಸಿ ಶೀಘ್ರ ಕ್ರಮ ಕೈಗೊಳ್ಳದಿದ್ದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು ಈ ಸಂದರ್ಭ ಪಕ್ಷದ ಮುಖಂಡರಾದ ಅನಿಲ್ ಶೆಟ್ಟಿ, ಹರಿದಾಸ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net