ಪಟ್ಟಣದ ಅಂಕತಟ್ಟಿ ನಂಜುಂಡಪ್ಪ ಸರ್ಕಲ್ನಿಂದ ಶಿಡ್ಲಘಟ್ಟ ಕ್ರಾಸ್ವರೆಗೂ ಪ್ರಸ್ತುತ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಇದರಿಂದಾಗಿಯೂ ಟ್ರಾಫಿಕ್ ಸಮಸ್ಯೆ ಮತ್ತಷ್ಟು ಜಟಿಲಗೊಂಡಿದೆ. ಹಳೇ ಸರ್ಕಾರಿ ಆಸ್ಪತ್ರೆ ರಸ್ತೆ, ಗಾಂಧಿಚೌಕ, ಬಜಾರ್ ರಸ್ತೆ, ವೆಂಕಟರಮಣಸ್ವಾಮಿ ದೇವಾಲಯದ ರಸ್ತೆ ಹಾಗೂ ರೇಷ್ಮೆ ಗೂಡಿನ ಮಾರುಕಟ್ಟೆ ರಸ್ತೆ ಸೇರಿದಂತೆ ಪಟ್ಟಣದ ಬಹುತೇಕ ಮಾರ್ಗಗಳು ಕಿರಿದಾಗಿರುವುದರಿಂದ ಸದಾ ವಾಹನ ದಟ್ಟಣೆಯಿಂದಲೇ ಕೂಡಿರುತ್ತವೆ. ಅದರಲ್ಲೂ ಬೆಳಗ್ಗೆ ಹಾಗೂ ಸಂಜೆ ವೇಳೆಯಂತೂ ಸವಾರರು ಕಿಲೋಮೀಟರ್ಗಟ್ಟಲೆ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿಮಾರ್ಣವಾಗಿದೆ.