ಪ್ಯಾಕ್ಸ್ ಅಧ್ಯಕ್ಷರಾಗಿ ಗಿರೀಶ್ ಅವಿರೋಧ ಆಯ್ಕೆ

ಪಟ್ಟಣದ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಬಿ.ಗಿರೀಶ್ ಅವರನ್ನು ಅಭಿನಂದಿಸಲಾಯಿತು. ಎಸ್.ನಾಗೇಶ್,  ಎಸ್.ಎ.ರಮೇಶ್, ಶಾರದಮ್ಮ, ಹರೀಶ್, ಶೈಲೇಶ್, ಲಕ್ಷ್ಮಮ್ಮ ಇತರರಿದ್ದರು.
ಪಟ್ಟಣದ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಬಿ.ಗಿರೀಶ್ ಅವರನ್ನು ಅಭಿನಂದಿಸಲಾಯಿತು. ಎಸ್.ನಾಗೇಶ್, ಎಸ್.ಎ.ರಮೇಶ್, ಶಾರದಮ್ಮ, ಹರೀಶ್, ಶೈಲೇಶ್, ಲಕ್ಷ್ಮಮ್ಮ ಇತರರಿದ್ದರು.
Published on
ಬೇಲೂರು: ಪಟ್ಟಣದ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿ.ಗಿರೀಶ್ ಗುರುವಾರ ಅವಿರೋಧವಾಗಿ ಆಯ್ಕೆಯಾದರು. ಈ ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಬಿ.ಗಿರೀಶ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕ ಗುರುಮೂರ್ತಿ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ನೂತನ ಅಧ್ಯಕ್ಷ ಬಿ.ಗಿರೀಶ್ ಮಾತನಾಡಿ, ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ ಸಂಘದ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ರೈತರು ಹಾಗೂ ಸದಸ್ಯರ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಿ, ಎಲ್ಲ ನಿರ್ದೇಶಕರ ಸಹಕಾರದೊಂದಿಗೆ ಸಂಘವನ್ನು ಮತ್ತಷ್ಟು ಅಭಿವೃದ್ಧಿಪಡಿಸುವುದಾಗಿ ತಿಳಿಸಿದರು.
ನಿರ್ದೇಶಕರಾದ ಎಸ್.ನಾಗೇಶ್ ಮಾತನಾಡಿ, ಸಹಕಾರ ಕ್ಷೇತ್ರದ ಬಗ್ಗೆ ಗಿರೀಶ್ ಅವರಿಗೆ ಇರುವ ಅನುಭವ ಹಾಗೂ ಜ್ಞಾನ ಸಂಘದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಸಂಘವು ಮತ್ತಷ್ಟು ಪ್ರಗತಿ ಸಾಧಿಸಲಿದೆ ಎಂದರು.
ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಎಸ್.ಎ.ರಮೇಶ್, ಮಾಜಿ ಅಧ್ಯಕ್ಷೆ ಶಾರದಮ್ಮ, ನಿರ್ದೇಶಕರಾದ ಹರೀಶ್, ಶೈಲೇಶ್, ಲಕ್ಷ್ಮಮ್ಮ, ಕುಮಾರ್, ಚಂದ್ರನಾಯಕ್, ಕಾರ್ಯನಿರ್ವಹಣಾಧಿಕಾರಿ ಹೊನ್ನೇಗೌಡ, ಸಿಬ್ಬಂದಿ ಮೇಘನಾ, ಏಲಕ್ಕಿಗೌಡ, ಭಾಗ್ಯಮ್ಮ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net