ರಾಜ್ಯಸಭೆಗೆ ಮುಸ್ಲಿಂಗೆ ಅವಕಾಶ ಕೊಡಿ

ವಿಧಾನಸೌಧ
ವಿಧಾನಸೌಧ
Published on
ಬೆಂಗಳೂರು: ರಾಜ್ಯಸಭೆಗೆ ರಾಜ್ಯದಿಂದ 4 ಸ್ಥಾನಗಳಿದ್ದು, ಅದರಲ್ಲಿ 3 ಸ್ಥಾನಗಳು ಕಾಂಗ್ರೆಸ್‌ಗೆ ಸಿಗಲಿದೆ. ಈ ಪೈಕಿ ಒಂದು ಸ್ಥಾನವನ್ನು ಮುಸ್ಲಿಮರಿಗೆ ಕೊಡಬೇಕೆಂದು ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟ ಕಾಂಗ್ರೆಸ್‌ಗೆ ಆಗ್ರಹಿದೆ.
ರಾಜ್ಯದಲ್ಲಿ 12 ರಾಜ್ಯಸಭಾ ಸದಸ್ಯರ ಪೈಕಿ ಒಬ್ಬರು ಮಾತ್ರ ಮುಸ್ಲಿಮರು. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಕನಿಷ್ಠ ಇಬ್ಬರು ಲೋಕಸಭಾ ಸದಸ್ಯರು ಮುಸ್ಲಿಂ ಸಮುದಾಯದಿಂದ ಇರುತ್ತಿದ್ದರು. ಈಗ ಮುಸ್ಲಿಂ ಸಮುದಾಯದಿಂದ ಒಬ್ಬೇ ಒಬ್ಬ ಲೋಕಸಭಾ ಸದಸ್ಯರು ಇಲ್ಲ. ಕಾಂಗ್ರೆಸ್‌ನಿಂದ ಮುಸ್ಲಿಮರಿಗೆ ಕೊಡುವ ಲೋಕಸಭಾ ಟಿಕೆಟ್ ಸಂಖ್ಯೆಯೇ ಕೇವಲ ಒಂದಕ್ಕೆ ಇಳಿದಿದೆ. ರಾಜ್ಯಸಭಾ ಸದಸ್ಯರು ಒಬ್ಬರು ಮಾತ್ರ ಇದ್ದಾರೆ. ಸಂಸತ್ತಿನಲ್ಲಿ ರಾಜ್ಯದ ಮುಸ್ಲಿಂ ಸಮುದಾಯದ ಪ್ರಾತಿನಿಧ್ಯ ತೀರಾ ಕುಸಿದು ಹೋಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುವಲ್ಲಿ ಮುಸ್ಲಿಂ ಸಮುದಾಯ ನಿರ್ಣಾಯಕ ಪಾತ್ರ ವಹಿಸಿದೆ. ಒಗ್ಗಟ್ಟಾಗಿ ಕಾಂಗ್ರೆಸ್‌ನನ್ನು ಬೆಂಬಲಿಸಿ ಮತ ಹಾಕಿದೆ. ಬೇರೆ ಯಾವುದೇ ಸಮುದಾಯಕ್ಕೆ ಹೋಲಿಸಿದರೆ ಮುಸ್ಲಿಂ ಸಮುದಾಯ ಕಾಂಗ್ರೆಸ್ ಅತಿ ಹೆಚ್ಚು ಪ್ರಮಾಣದಲ್ಲಿ ಮತ ಚಲಾಯಿಸಿ ಅದು ಅಧಿಕಾರಕ್ಕೆ ಬರುವಲ್ಲಿ ಮಹತ್ವದ ಕೊಡುಗೆ ನೀಡಿದೆ.
ಆದರಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಶೇಷ ಮುತುವರ್ಜಿ ವಹಿಸಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net