ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು ಜಿಬಿಎ ಸೇರಿದಂತೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯಿತಿಗಳಲ್ಲಿ ಸಂಗ್ರಹಿಸಲಾಗಿರುವ ಒಟ್ಟು ಭಿಕ್ಷುಕರ ಸೆಸ್, ಅದರಲ್ಲಿ ಕೇಂದ್ರ ಪರಿಹಾರ ಸಮಿತಿಗೆ ಪಾವತಿಸಲಾದ ಮೊತ್ತ, ಬಾಕಿ ಉಳಿದ ಮೊತ್ತದ ಬಗ್ಗೆ ವಸ್ತುಸ್ಥಿತಿ ವರದಿ ನೀಡುವಂತೆ ರಾಜ್ಯ ಸರ್ಕಾರ ಹಾಗೂ ಜಿಬಿಎಗೆ ನಿರ್ದೇಶನ ನೀಡಿತು.