ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿ education

ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿ education
ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿ education
Published on
ಬೇತಮಂಗಲ: ಮಕ್ಕಳ ಉಜ್ವಲ ಭವಿಷ್ಯಕ್ಕೆ ಶಿಕ್ಷಣವೇ ಅಡಿಪಾಯ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳಾಗಿರುವುದರಿಂದ ಪಾಲಕರು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಬೇಕು ಎಂದು ನಿವೃತ್ತ ಶಿಕ್ಷಕ ತಾಯಲೂರ್​ ಗೋಪಿನಾಥ್​ ತಿಳಿಸಿದರು.education
ಕೆಜಿಎಫ್​ ತಾಲೂಕು ಸುಂದರಪಾಳ್ಯದ ಕರ್ನಾಟಕ ಪಬ್ಲಿಕ್​ ಶಾಲೆಯ ಆವರಣದಲ್ಲಿ 1998&-99ನೇ ಸಾಲಿನ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಗುರುವಂದನಾ ಮತ್ತು ಸ್ನೇಹ ಸಮ್ಮಿಲನದಲ್ಲಿ ಮಾತನಾಡಿ, ಶಿಕ್ಷಣದಿಂದ ಮಾತ್ರ ವಿದ್ಯಾರ್ಥಿಗಳು ಯಾವುದಾದರೂ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ. ಪ್ರತಿಯೊಬ್ಬರಿಗೂ ವೃತ್ತಿಯ ಬಗ್ಗೆ ಗೌರವವಿರಬೇಕು ಎಂದು ಹೇಳಿದರು.
ಗ್ರಾಮದ ಸತ್ಯನಾರಾಯಣ ಮಾತನಾಡಿ, ಹಿಂದೆ ಶಾಲೆಯ ಆವರಣವನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು. ಆದರೆ ಹಳೆಯ ವಿದ್ಯಾರ್ಥಿಗಳ ದೇಣಿಗೆ ಮತ್ತು ಪಾಲಕರ ಸಹಕಾರದಿಂದ ಶಾಲೆಯ ಆಸ್ತಿ ರಕ್ಷಣೆ ಮಾಡಲಾಗಿದೆ. ಇಂದು ಸುಂದರಪಾಳ್ಯದಲ್ಲಿ ಸುಸಜ್ಜಿತ ಶಾಲೆ ನಿಮಾರ್ಣವಾಗಿರುವುದು ನಮ್ಮೆಲ್ಲರ ಶ್ರಮಕ್ಕೆ ಸಿಕ್ಕ ಫಲ ಎಂದು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net