ಈ ಬಗ್ಗೆ ಆಯೋಗಕ್ಕೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಪಡೆಯಲು ಟಾಟಾ ಪವರ್ ಸಂಸ್ಥೆ ಸಲ್ಲಿಸಿರುವ ಅರ್ಜಿ ನಮೂನೆಗಳು ಸೇರಿ ಎಲ್ಲ ದಾಖಲೆಗಳು ಸಂಪೂರ್ಣವಾಗಿ ಆಂಗ್ಲ ಭಾಷೆಯಲ್ಲಿವೆ. ರಾಜ್ಯದಲ್ಲಿ ಕಾರ್ಯ ನಿರ್ವಹಿಸಲು ಮುಂದಾಗುವ ಯಾವುದೇ ಸಂಸ್ಥೆ ಈ ನೆಲದ ಭಾಷೆ, ಸಂಸ್ಕೃತಿ ಮತ್ತು ಭಾಷಾ ಹಕ್ಕುಗಳಿಗೆ ಗೌರವ ನೀಡಬೇಕು. ಅದು ಅವರ ಸಾಮಾಜಿಕ ಹೊಣೆಗಾರಿಕೆ ಎಂದಿದ್ದಾರೆ.