

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು: ಕೇಂದ್ರ ರೈಲ್ವೆ ಸಚಿವಾಲಯವು ದೇಶದ ವಿವಿಧ ರೈಲ್ವೆ ವಲಯಗಳ ಜಾಲತಾಣಗಳನ್ನು ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಆರಂಭಿಸಲು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಆಯಾ ರಾಜ್ಯಗಳ ಪ್ರಾದೇಶಿಕ ಭಾಷೆಗಳಿಗೂ ಸಮಾನ ಆದ್ಯತೆ ನೀಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹಿಸಿದೆ. ಈ ಸಂಬಂಧ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರ ಬರೆದಿದ್ದು, ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಬಹುಭಾಷಿಕ ಪರಂಪರೆಗೆ ಅನುಗುಣವಾಗಿ ರಾಜ್ಯಗಳ ಅಧಿಕೃತ ಭಾಷೆಗಳಿಗೂ ರೈಲ್ವೆ ಜಾಲತಾಣಗಳಲ್ಲಿ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.