ಅಭ್ಯಾಸದ ಕಡೆಗೆ ಹೆಚ್ಚಿನ ಆದ್ಯತೆ ನೀಡಿ

ಯಾದಗಿರಿ ತಾಲೂಕಿನ ಮುದ್ನಾಳದ ಸರ್ಕಾರಿ ಶಾಲೆಗೆ ಮಂಗಳವಾರ ಜಿಲ್ಲಾಽಕಾರಿ ರಾಹುಲ್ ಪಾಂಡ್ವೆ ಭೇಟಿ ನೀಡಿ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿ ಊಟ ಸವಿದರು.
ಯಾದಗಿರಿ ತಾಲೂಕಿನ ಮುದ್ನಾಳದ ಸರ್ಕಾರಿ ಶಾಲೆಗೆ ಮಂಗಳವಾರ ಜಿಲ್ಲಾಽಕಾರಿ ರಾಹುಲ್ ಪಾಂಡ್ವೆ ಭೇಟಿ ನೀಡಿ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿ ಊಟ ಸವಿದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಸಲಹೆ
  • ಮುದ್ನಾಳ-ಹೊನಗೇರಾ ಸರ್ಕಾರಿ ಶಾಲೆಗೆ ಭೇಟಿ
ಯಾದಗಿರಿ: ಮಕ್ಕಳು ಹೆಚ್ಚಿನ ಸಮಯ ಅಭ್ಯಾಸದ ಕಡೆಗೆ ಮೀಸಲಿಡಬೇಕು ಎಂದು ಜಿಲ್ಲಾಽಕಾರಿ ರಾಹುಲ್ ಪಾಂಡ್ವೆ ಹೇಳಿದರು.
ತಾಲೂಕಿನ ಮುದ್ನಾಳ ಹಾಗೂ ಹೊನಗೇರಾ ಗ್ರಾಮದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಂಗಳವಾರ ಭೇಟಿ ನೀಡಿ ಶಾಲೆಯ ಶೈಕ್ಷಣಿಕ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ನಂತರ ಅಕ್ಷರ ದಾಸೋಹ ಯೋಜನೆಯಡಿ ಮಕ್ಕಳಿಗೆ ನೀಡಲಾಗುತ್ತಿರುವ ಮಧ್ಯಾಹ್ನದ ಬಿಸಿಯೂಟವನ್ನು ಮಕ್ಕಳೊಂದಿಗೆ ಕುಳಿತು ಸವಿದರು.
ನಂತರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ಶೈಕ್ಷಣಿಕ ಸಿದ್ಧತೆ ಹಾಗೂ ಪರೀಕ್ಷಾ ತಯಾರಿಕೆ ಕುರಿತು ಮಾಹಿತಿ ಪಡೆದರು. ವಿದ್ಯಾರ್ಥಿಗಳೊಂದಿಗೆ ಇಂಗ್ಲಿಷ್ ವಿಷಯದ ಪ್ರಶ್ನೆಪತ್ರಿಕೆಯನ್ನು ವಿಶ್ಲೇಷಿಸಿ, ಪ್ರಶ್ನೆಗಳನ್ನು ಅರ್ಥೈಸಿಕೊಂಡು ಉತ್ತರಿಸುವ ವಿಧಾನ, ಸಮಯ ನಿರ್ವಹಣೆ ಹಾಗೂ ನಿರಂತರ ಅಭ್ಯಾಸದ ಮಹತ್ವ ಕುರಿತು ವಿವರಿಸಿದರು. ಪ್ರತಿ ವಿದ್ಯಾರ್ಥಿಯೂ ಶೇ.೮೦ಕ್ಕಿಂತ ಹೆಚ್ಚಿನ ಅಂಕ ಗಳಿಸುವ ಗುರಿ ಹೊಂದಬೇಕು. ನಿಯಮಿತ ಅಧ್ಯಯನ, ಪುನರಾವರ್ತನೆ ಹಾಗೂ ಮಾದರಿ ಪ್ರಶ್ನೆಪತ್ರಿಕೆಗಳ ಅಭ್ಯಾಸಕ್ಕೆ ಹೆಚ್ಚಿನ ಸಮಯ ನೀಡಬೇಕು ಎಂದು ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಗುರಿ ಹಾಗೂ ಸಮಸ್ಯೆ ಕುರಿತು ವಿಚಾರಿಸಿದರು. ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಬಗ್ಗೆ ಆತ್ಮವಿಶ್ವಾಸ ಮೂಡಿಸುವುದು ಹಾಗೂ ಉತ್ತಮ ಫಲಿತಾಂಶಕ್ಕಾಗಿ ಅಗತ್ಯ ಮಾರ್ಗದರ್ಶನ ನೀಡುವುದು ಶಿಕ್ಷಕರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಈ ವೇಳೆ ಡಿಡಿಪಿಐ ಚನ್ನಬಸಪ್ಪ ಮುಧೋಳ, ತಾಲೂಕು ಅಕ್ಷರ ದಾಸೋಹ ಅಽಕಾರಿ ಚನ್ನಪ್ಪ ಕಲ್ಮನಿ, ಎಸ್‌ಡಿಎಂಸಿ ಅಧ್ಯಕ್ಷ ಹಣಮಂತರೆಡ್ಡಿ, ಸಾಬಣ್ಣ ಪೂಜಾರಿ, ಮುಖ್ಯಗುರು ಗ್ಯಾನಪ್ಪ ದಾಸನ್ ಹಾಗೂ ಶಾಲಾ ಶಿಕ್ಷಕರು ಇದ್ದರು. ಮುದ್ನಾಳ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಹಿಂದಿನ ವರ್ಷ ಶೇ.೧೦೦ ಫಲಿತಾಂಶ ತಂದಿರುವುದನ್ನು ಶ್ಲಾöಸಿದ ಜಿಲ್ಕಾಲಾಧಿಕಾರಿ, ಪ್ರಸಕ್ತ ಸಾಲಿನಲ್ಲಿಯೂ ಉತ್ತಮ ಫಲಿತಾಂಶ ತೆಗೆದುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ

ವಿದ್ಯಾರ್ಥಿಗಳು ಇಂಗ್ಲಿಷ್, ಗಣಿತ, ವಿಜ್ನಾನ ಸೇರಿ ಎಲ್ಲ ವಿಷಯಗಳಿಗೆ ನಿಗದಿತ ಸಮಯ ಹಂಚಿಕೆ ಮಾಡಿಕೊಂಡು ಪ್ರತಿದಿನ ಅಭ್ಯಾಸ ಮಾಡುವಂತೆ ಸಲಹೆ ನೀಡಿದ ಜಿಲ್ಲಾಧಿಕಾರಿ ಪಾಂಡ್ವೆ, ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಪ್ರೋತ್ಸಾಹಿಸಿದರು. ೬೨೫ಕ್ಕೆ ೬೨೫ ಅಂಕ ಗಳಿಸುವ ಗುರಿಯನ್ನು ಇಟ್ಟುಕೊಂಡು, ಅದನ್ನು ಸಾಽಸುವ ನಿಟ್ಟಿನಲ್ಲಿ ಅಭ್ಯಾಸ ಮಾಡಬೇಕು ಎಂದು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net