ಗುರುಮಠಕಲ್: ಕಠಿಣ ಪರಿಶ್ರಮದಿಂದ ಮಾತ್ರ ನಾವು ಇಟ್ಟುಕೊಂಡ ಗುರಿ ತಲುಪಲು ಸಾಧ್ಯ ಎಂದು ಪುರಸಭೆ ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ ಹೇಳಿದರು.
ಪಟ್ಟಣದ ಪುರಸಭೆ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಏನಾದರು ಸಾಧಿಸುವ ಛಲ ಮತ್ತು ರ್ನಿಧಿಷ್ಟ ಗುರಿ ಇಟ್ಟುಕೊಳ್ಳಬೇಕು. ಈ ಸಾಧನೆಗೆ ಯಾವುದೇ ಲಿಂಗ ಬೇಧವಿಲ್ಲ. ಕಠಿಣ ಪರಿಶ್ರಮದಿಂದ ಮಾತ್ರ ನಾವು ನಮ್ಮ ಗುರಿ ಮುಟ್ಟಲು ಸಾಧ್ಯ ಎಂದರು.
ಇಂದು ಮಹಿಳೆಯರ ಕೊಡುಗೆ ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಸ್ವಾತಂತ್ರ ಹೋರಾಟ, ರಾಜಕೀಯ, ವಿಜ್ಞಾನ ಮತ್ತು ತಂತ್ರಜ್ಞಾ ಸೇರಿ ಆಡಳಿತ ನಿರ್ವಹಣೆ ಸೇರಿ ಎಲ್ಲ ಕ್ಷೇತ್ರಗಳಲ್ಲಿಯೂ ಅಪಾರ ಕೊಡುಗೆ ನೀಡಿದ್ದು, ಅವರ ಸಾಧನೆ ಅಮೋವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಲೆಕ್ಕಾಧಿಕಾರಿ ಮಾಳಮ್ಮ ವಿಶೇಷ ಉಪನ್ಯಾಸ ನೀಡಿದರು. ಈ ವೇಳೆ ಮಹಿಳಾ ಸಿಬ್ಬಂದಿಗೆ ಸನ್ಮಾನಿಸಲಾಯಿತು. ಪುರಸಭೆ ವ್ಯವಸ್ಥಾಪಕ ಮಲ್ಲಿಕಾರ್ಜುನ ಸುಂಗಾಲ್ಕರ್, ಆರೋಗ್ಯ ನಿರೀಕ್ಷಕ ರಾಮುಲು ಗೌಡ, ವೀರಭದ್ರಪ್ಪ, ಅಶೋಕ ಗೌಡ, ಬಸವರಾಜ, ನೀಲಮ್ಮ, ಬಾಬಾ ಇತರರಿದ್ದರು.