ಸಿಇಟಿ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ: ಎರಡು ಕೃಪಾಂಕಗಳನ್ನು ಪ್ರಕಟಿಸಿದ ಕೆಇಎ

ಸಾಮಾನ್ಯ ಪ್ರವೇಶ ಪರೀಕ್ಷೆ
ಸಾಮಾನ್ಯ ಪ್ರವೇಶ ಪರೀಕ್ಷೆ
Published on

ಪ್ರಮುಖ ಮುಖ್ಯಾಂಶಗಳು

  • ಕಳೆದ ಏ.23 ಹಾಗೂ 24ರಂದು ಸಿಇಟಿ ನಡೆಸಲಾಗಿತ್ತು. ಏ.26ರಂದು ತಾತ್ಕಾಲಿಕ ಸರಿಯುತ್ತರಗಳನ್ನು ಬಿಡುಗಡೆ ಮಾಡಿ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು.
  • ತಜ್ಞರ ಸಮಿತಿಯು ಆಕ್ಷೇಪಣೆಗಳನ್ನು ಪರಿಶೀಲಿಸಿದ್ದು, ಸರಿಯುತ್ತರಗಳನ್ನು ಪರಿಷ್ಕರಿಸಲಾಗಿದೆ.
  • ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರದ ತಲಾ ಒಂದು ಪ್ರಶ್ನೆಗೆ ಕೃಪಾಂಕಗಳನ್ನು ಪ್ರಕಟಿಸಲಾಗಿದೆ.
ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ- 2026) ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಎರಡು ಕೃಪಾಂಕಗಳನ್ನು ಘೋಷಿಸಿದೆ.
ಕಳೆದ ಏ.23 ಹಾಗೂ 24ರಂದು ಸಿಇಟಿ ನಡೆಸಲಾಗಿತ್ತು. ಏ.26ರಂದು ತಾತ್ಕಾಲಿಕ ಸರಿಯುತ್ತರಗಳನ್ನು ಬಿಡುಗಡೆ ಮಾಡಿ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ತಜ್ಞರ ಸಮಿತಿಯು ಆಕ್ಷೇಪಣೆಗಳನ್ನು ಪರಿಶೀಲಿಸಿದ್ದು, ಸರಿಯುತ್ತರಗಳನ್ನು ಪರಿಷ್ಕರಿಸಲಾಗಿದೆ. ಅದರಂತೆ, ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರದ ತಲಾ ಒಂದು ಪ್ರಶ್ನೆಗೆ ಕೃಪಾಂಕಗಳನ್ನು ಪ್ರಕಟಿಸಲಾಗಿದೆ. ಅಂತೆಯೇ, ಜೀವಶಾಸದಲ್ಲಿ ಒಂದು ಉತ್ತರಕ್ಕೆ ಎರಡು ಪರ್ಯಾಯಗಳನ್ನು ನೀಡಲಾಗಿದೆ. ಗಣಿತ ಸರಿಯುತ್ತರಗಳಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಕೆಇಎ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net