ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ಜಿಪಂ ಸಿಇಒ ನೊಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ರೋಟರಿ ಕ್ಲಬ್ ಆಫ್ ಹಂಪಿ ಪರ್ಲ್ಸ್ ಅಧ್ಯಕ್ಷೆ ಅನ್ನಪೂರ್ಣ ಸದಾಶಿವ, ಕಾರ್ಯದರ್ಶಿ ದೀಪಾ ಅಗರ್ವಾಲ್ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅಭಿಮತ
ಹೊಸಪೇಟೆ:ಅಧಿಕಾರಿಗಳು ಮತ್ತು ಸಿಬ್ಬಂದಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಂಡಾಗ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ಸಂಘ ಹಾಗೂ ರೋಟರಿ ಕ್ಲಬ್ ಆಫ್ ಹಂಪಿ ಪರ್ಲ್ಸ್‌ನಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಆಯೋಜಿಸಿದ್ದ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಬೆಳಗ್ಗೆಯಿಂದ ಸಂಜೆಯವರೆಗೆ ಸಾರ್ವಜನಿಕರ ಅಹವಾಲು ಕೇಳುವುದು, ಕಡತಗಳ ವಿಲೇವಾರಿ ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನದಂತಹ ಒತ್ತಡದ ಕೆಲಸದ ನಡುವೆ, ನೌಕರರು ಆರೋಗ್ಯದ ಕಡೆಗೆ ಗಮನ ಹರಿಸುವುದನ್ನೇ ಮರೆತು ಬಿಡುತ್ತಾರೆ.
ಆರೋಗ್ಯ ಕೈಕೊಟ್ಟಾಗ ಆಸ್ಪತ್ರೆಗೆ ಓಡುವುದಕ್ಕಿಂತ, ಮುಂಜಾಗ್ರತೆಯಾಗಿ ವರ್ಷಕ್ಕೊಮ್ಮೆಯಾದರೂ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ. ಸಿಬ್ಬಂದಿ ಆರೋಗ್ಯವಾಗಿದ್ದರೆ ಪ್ರಗತಿ ಸಾಧ್ಯ ಎಂದರು.
ಜಿಪಂ ಸಿಇಒ ನೊಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ, ರೋಟರಿ ಕ್ಲಬ್ ಆಫ್ ಹಂಪಿ ಪರ್ಲ್ಸ್ ಅಧ್ಯಕ್ಷೆ ಅನ್ನಪೂರ್ಣ ಸದಾಶಿವ, ಕಾರ್ಯದರ್ಶಿ ದೀಪಾ ಅಗರ್ವಾಲ್ ಇತರರಿದ್ದರು.