

ಪ್ರಮುಖ ಮುಖ್ಯಾಂಶಗಳು
ಗಮನಸೆಳೆದ ವಿವಿಧ ಇಲಾಖೆ ಮಳಿಗೆಗಳು
ಪ್ರಜಾಸೇವಾ ಆಂದೋಲನ ಹಿನ್ನೆಲೆಯಲ್ಲಿ ವಿವಿಧ ಇಲಾಖೆಯ ಮಳಿಗೆಗಳನ್ನು ಹಾಕಲಾಗಿತ್ತು. ಪ್ರಜಾಸೇವಾ ಆಂದೋಲನದ ಸಂದರ್ಭದಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸಲು ಒಟ್ಟು 10 ಕೌಂಟರ್‌ಗಳನ್ನು ಸ್ಥಾಪಿಸಲಾಗಿತ್ತು. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಆನ್‌ಲೈನ್‌ನಲ್ಲಿ ದಾಖಲಿಸಿಕೊಂಡರು. ಸಂಜೆಯ ಹೊತ್ತಿಗೆ ಒಟ್ಟು 542 ಅರ್ಜಿಗಳು ಸ್ವೀಕೃತಗೊಂಡಿವೆ. ಅವುಗಳಲ್ಲಿ ಹೆಚ್ಚಾಗಿ ಮನೆ ಹಾಗೂ ನಿವೇಶನಕ್ಕೆ ಸಂಬಂಧಿಸಿದವು ಇದ್ದರೆ, ಇದರ ಜೊತೆಗೆ ವಿವಿಧ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಒಳಗೊಂಡಿದ್ದವು. ಸ್ಥಳದಲ್ಲಿಯೇ 5 ಜನರಿಗೆ ಪಿಂಚಣಿ ಯೋಜನೆಯ ಆದೇಶ ಪತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವರು ವಿತರಣೆ ಮಾಡಿದರು.
ಒಟ್ಟು 1211 ಅರ್ಜಿಗಳು ಸ್ವೀಕೃತಶನಿವಾರ ಜಿಲ್ಲೆಯ ಗುಳೇದಗುಡ್ಡದಲ್ಲಿ ತಾಲೂಕು ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಹಾಗೂ ಬೀಳಗಿ ಕ್ಷೇತ್ರದಲ್ಲಿ ಶಾಸಕ ಜೆ.ಟಿ. ಪಾಟೀಲ, ಮುಧೋಳ ಕ್ಷೇತ್ರದಲ್ಲಿ ಶಾಸಕ ಆರ್.ಬಿ. ತಿಮ್ಮಾಪೂರ ಹಾಗೂ ಬಾಗಲಕೋಟೆ ತಾಲೂಕಿನಲ್ಲಿ ಶಾಸಕ ಉಮೇಶ ಮೇಟಿ ನೇತೃತ್ವದಲ್ಲಿ ಹೋಬಳಿ ಮಟ್ಟದಲ್ಲಿ ಪ್ರಜಾ ಸೇವಾ ಕಾರ್ಯಕ್ರಮಗಳಲ್ಲಿ ಒಟ್ಟು 1211 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 13 ಅರ್ಜಿಗಳನ್ನು ಸ್ಥಳದಲ್ಲಿ ಇತ್ಯರ್ಥ ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಅವರು ತಿಳಿಸಿದ್ದಾರೆ.