ಶಹಾಪುರ: ಸಣ್ಣ ಮತ್ತು ಅತಿ ಸಣ್ಣ ರೈತರ ಸಬಲೀಕರಣಕ್ಕೆ ಸರ್ಕಾರ ಸದಾ ಬದ್ಧವಾಗಿದೆ ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.
ನಗರದ ಸಚಿವರ ಗೃಹ ಕಚೇರಿಯಲ್ಲಿ ಆಯೋಜಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಯಾದಗಿರಿ ಜಿಲ್ಲೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ ಶನಿವಾರ ಹಮ್ಮಿಕೊಂಡ 2021&22 ಮತ್ತು 2022&23ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳಿಗೆ ಪಂಪ್ಸೆಟ್ ಮತ್ತು ಪೂರಕ ಸಾಮಗ್ರಿಗಳ ವಿತರಣೆ, ಭೂ ಒಡೆತನದಲ್ಲಿ ಮಂಜೂರಾದ ಭೂಮಿ ಪತ್ರಗಳ ಹಸ್ತಾಂತರ ಹಾಗೂ ಸ್ವಸಹಾಯ ಸಂಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಮ್ಮದು ಕೃಷಿ ಪ್ರಧಾನ ದೇಶ. ರೈತರು ಕೃಷಿಯಲ್ಲಿ ಅಭಿವೃದ್ಧಿ ಸಾಧಿಸಿದರೆ ದೇಶ ಅಭಿವೃದ್ಧಿಯಾದಂತೆ. ಒಣ ಬೇಸಾಯ ಇರುವ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಗಂಗಾ ಕಲ್ಯಾಣ ಯೋಜನೆ ಮೂಲಕ ನೀರಾವರಿಯ ಒದಗಿಸಿ ರೈತರ ಸಬಲೀಕರಣಕ್ಕೆ ಸರ್ಕಾರ ಸದಾ ಬದ್ಧವಾಗಿದೆ ಎಂದು ಹೇಳಿದರು.
ಈಗ 80 ಜನ ರೈತ ಫಲಾನುಭವಿಗಳಿಗೆ ಕೊಳವೆ ಬಾವಿಗಳಿಗೆ ಪಂಪ್ಸೆಟ್ ಮತ್ತು ಪೂರಕ ಸಾಮಗ್ರಿಗಳನ್ನು ವಿತರಣೆ ಮಾಡಲಾಗಿದೆ. ಇನ್ನು 200 ಜನ ರೈತರು ಅರ್ಜಿ ಸಲ್ಲಿಸಿದ್ದಾರೆ ಹಂತ ಹಂತವಾಗಿ ಅವರಿಗೂ ಈ ಯೋಜನೆಯಡಿ ಕೊಳವೆಬಾವಿ ಮತ್ತು ಪೂರಕ ಸಾಮಗ್ರಿಗಳನ್ನು ವಿತರಿಸಲಾಗುವುದು. ಭೂ ಒಡೆತನ ಯೋಜನೆಯಲ್ಲಿ ಭೂ ರೈತ ಫಲಾನುಭವಿಗಳಿಗೆ ಭೂ ಮಂಜೂರಾತಿ ಹಕ್ಕುಪತ್ರ ಈ ವೇಳೆ ವಿತರಿಸಲಾಯಿತು.
ಈ ವೇಳೆ ಕರ್ನಾಟಕ ಸರ್ಕಾರದ ಮದ್ಯಪಾನ ನಿಯಂತ್ರಣ ಮಂಡಳಿ ಅಧ್ಯ ಶರಣಪ್ಪ ಸಲದಾಪುರ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯ ಗೌಡಪ್ಪಗೌಡ ಅಲ್ದಾಳ, ಶಾಂತಪ್ಪ ಕಟ್ಟಿಮನಿ, ಎಸ್ಟಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಸಿದ್ದಣ್ಣ ಅಣಬಿ ಸೇರಿ ಅನೇಕರು ಇದ್ದರು.