ಮಾಹಿತಿ ಆಯೋಗದ ನಿರ್ದೇಶನದಂತೆ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಮಿತಿಯಲ್ಲಿ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು.ಅರಣ್ಯ ಇಲಾಖೆ ಜಂಟಿ ಕಾರ್ಯದರ್ಶಿ, ಕಾನೂನು ಇಲಾಖೆ ಉಪ ಕಾರ್ಯದರ್ಶಿ, ಡಿಪಿಎಆರ್‌ನ ಉಪಕಾರ್ಯದರ್ಶಿ ಸದಸ್ಯರಾಗಿದ್ದು, ಪ್ರವಾಸೋದ್ಯಮ ಇಲಾಖೆಯ ಶಾಖಾಧಿಕಾರಿ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ. ಸಮಿತಿಯು 30 ದಿನಗಳ ಕಾಲಾವಕಾಶವನ್ನು ಕೋರಿದೆ.