ರಾಮದುರ್ಗ: ನೂರು ಹಾಸಿಗೆ ಹೊಂದಿದ ಸ್ಥಳಿಯ ಸರ್ಕಾರಿ ಆಸ್ಪತ್ರೆ ಸುಧಾರಣೆಗೆ 33 ಕೋಟಿ ರೂ. ಬಿಡುಗಡೆಯಾಗಿದೆ. ೇತ್ರದ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಶಾಸಕ ಅಶೋಕ ಪಟ್ಟಣ ಭರವಸೆ ನೀಡಿದರು.
ನಗರದ ತೇರಬಜಾರದಲ್ಲಿ 77ನೇ ಗಣರಾಜ್ಯೋತ್ಸವ ಅಂಗವಾಗಿ ಸೋಮವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಈಗಾಗಲೇ ಕೋಟ್ಯಂತರ ರೂ. ವೆಚ್ಚದಲ್ಲಿ ಹಲವು ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನುಳಿದ ರಸ್ತೆಗಳ ಸುಧಾರಣೆಗೆ 70 ಕೋಟಿ ರೂ. ಮಂಜೂರಾಗಿದ್ದು, ಶ್ರೀ ಕಾಮಗಾರಿ ಪ್ರಾರಂಭಿಸುತ್ತೇನೆ. ೇತ್ರದ ಪ್ರಗತಿಗೆ ಮುಖ್ಯಮಂತ್ರಿಗಳ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಿಸಿದ್ದೇನೆ. ಗೊಣ್ಣಾಗರ ಗ್ರಾಮ ಹತ್ತಿರ ಮಲಪ್ರಭಾ ನದಿಗೆ ಸುಮಾರು 123 ಕೋಟಿ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಮಾಡಲಿಕ್ಕೆ ಅನುದಾನ ಬಿಡುಗಡೆಯಾಗಿದೆ ಎಂದರು.
ನಗರದ ಅರಮನೆ ಆವರಣದಲ್ಲಿ ತಾಲೂಕಾಡಳಿತದ ಪರವಾಗಿ ಧ್ವಜಾರೋಹಣ ನೆರವೇರಿಸಿ ಸಂದೇಶ ವಾಚನ ಮಾಡಿದ ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ, ಜಾತ್ಯಾತಿತ, ಪಾತೀತವಾಗಿ ನಮ್ಮ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಜಾರಿಗೆ ತಂದ ಈ ದಿನ ದೇಶದಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ. ಸಂವಿಧಾನದ ಆಶಯ ಎಲ್ಲರೂ ಪಾಲಿಸಬೇಕು ಎಂದು ಕರೆ ನೀಡಿದರು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ, ಡಿವೈಎಸ್ಪಿ ಚಿದಂಬರ ಮಡಿವಾಳರ, ಸಿಪಿಐ ವಿನಾಯಕ ಬಡಿಗೇರ, ಪುರಸಭೆ ಮುಖ್ಯಾಧಿಕಾರಿ ಈರಣ್ಣ ಗುಡದಾರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹಣಮಂತ ವಕ್ಕುಂದ, ೇತ್ರ ಶಿಣಾಧಿಕಾರಿ ಸುರೇಂದ್ರ ಕಾಂಬಳೆ, ಹೆಸ್ಕಾಂ ಅಭಿಯಂತ ನಾಯಕ ಇತರರಿದ್ದರು.