ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರಿ ಶಾಲೆಗಳು ಸಜ್ಜು

ಬೇಲೂರು ಹೊಸನಗರ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2026-2027ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪಾದರ್ಪಣೆ ಮಾಡಿದ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಪಠ್ಯ ಪುಸ್ತಕ ವಿತರಿಸಲಾಯಿತು. ಸಿಆರ್‌ಪಿ ಮೋಕ್ಷಾ, ಕಿರಣ್ ಕುಮಾರ್, ಯಶೋದಾ ಇತರರು ಇದ್ದರು.
ಬೇಲೂರು ಹೊಸನಗರ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2026-2027ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪಾದರ್ಪಣೆ ಮಾಡಿದ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಪಠ್ಯ ಪುಸ್ತಕ ವಿತರಿಸಲಾಯಿತು. ಸಿಆರ್‌ಪಿ ಮೋಕ್ಷಾ, ಕಿರಣ್ ಕುಮಾರ್, ಯಶೋದಾ ಇತರರು ಇದ್ದರು.
Published on
ಬೇಲೂರು: ಪಟ್ಟಣದ ಹೊಸನಗರ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು, ಸೋಮವಾರ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು, ಪುಷ್ಪಗಳನ್ನು ಹಾಕಿ, ಪಠ್ಯ ಪುಸ್ತಕ ನೀಡಿ, ಸಿಹಿ ತಿನಿಸುವ ಮೂಲಕ ಸ್ವಾಗತಿಸಿ ಶಾಲಾ ಪ್ರಾರಂಭೋತ್ಸವಕ್ಕೆ ವಿಶೇಷ ಮೆರುಗು ನೀಡಿದರು.
ಕ್ಷೇತ್ರ ಶಿಕ್ಷಣ ಇಲಾಖೆಯ ಕ್ಲಸ್ಟರ್‌ನ ಸಿಆರ್‌ಪಿ ಮೋಕ್ಷಾ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಾವುದಕ್ಕೂ ಕಡಿಮೆ ಇಲ್ಲ. ಶಿಕ್ಷಕರು ಪಾಲಕರೊಂದಿಗೆ ಸಂಪರ್ಕ ಇಟ್ಟುಕೊಂಡು ಮಕ್ಕಳ ವಿದ್ಯಾಭ್ಯಾಸದ ಪ್ರಗತಿಯ ಬಗ್ಗೆ ಆಗಿಂದಾಗ್ಗೆ ಚರ್ಚಿಸುತ್ತಿರಬೇಕು. ಸರ್ಕಾರಿ ಶಾಲೆಯಲ್ಲಿ ಪ್ರತಿಭಾವಂತ ಶಿಕ್ಷಕರಿದ್ದು, ಮಕ್ಕಳಿಗೆ ಅಗತ್ಯವಾದ ಸಂಪನ್ಮೂಲ, ವಿಷಯವಾರು ಶಿಕ್ಷಕರ ಅಗತ್ಯ ಇದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಉತ್ತುಂಗಕ್ಕೇರಲು ಎಲ್ಲರೂ ಸಹಕರಿಸಬೇಕಿದೆ ಎಂದರು.
ಶಾಲೆಯ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಮಾತನಾಡಿ, ಶಾಲೆಗೆ ಬರುವ ಮಕ್ಕಳಿಗೆ ಪ್ರಾರಂಭದಲ್ಲಿ ಉತ್ತಮ ಪರಿಸರ ಸೃಷ್ಠಿಸಿ ಪ್ರತಿಯೊಂದು ವಿಷಯದಲ್ಲೂ ಉತ್ತಮ ಬೋಧನೆ ನೀಡಲು ಎಲ್ಲ ಶಿಕ್ಷಕರು ಸಿದ್ಧರಿದ್ದೇವೆ. ಮಕ್ಕಳಿಗೆ ಬೇಕಾದ ಬೌದ್ಧಿಕ ಪರಿಸರವನ್ನು ಈಗಾಗಲೇ ಹೊಸನಗರ ಶಾಲೆಯಲ್ಲಿ ಸೃಷ್ಟಿಸಲಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಉಚಿತವಾಗಿ ಸಿಗುವ ಸೌಲಭ್ಯವನ್ನು ಪಡೆದುಕೊಂಡು ಗುಣಮಟ್ಟದ ಶಿಕ್ಷಣ ಪಡೆಯಬೇಕು. ಈ ವರ್ಷದಿಂದ ದ್ವಿಭಾಷಾ ತರಗತಿಗಳು ಪ್ರಾರಂಭವಾಗಿದ್ದು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಸರ್ಕಾರಿ ಶಾಲೆಯ ಶಿಕ್ಷಕರು ಸನ್ನದ್ಧರಾಗಿದ್ದಾರೆ ಎಂದು ತಿಳಿಸಿದರು.
ಸಹ ಶಿಕ್ಷಕರಾದ ಯಶೋದಾ, ರಮಾಮಣಿ, ಮಮತಾ, ಪಾಲಕರಾದ ಶಾಜಿಯಾ, ಲಕ್ಷ್ಮೀ, ಭಾಗ್ಯಾ, ಚೈತ್ರಾ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net