ಮಕ್ಕಳಗೇರಿ ಗ್ರಾಮದಲ್ಲಿ ಸ್ವಾತಂತ್ರೋತ್ಸವ ದಿನ ಆಚರಿಸಲಾಯಿತು. ಎನ್.ಎನ್.ಹಾಸಿಲಕರ, ಸಿದ್ದವ್ವ ನಾಯಕ, ಬಾಳೇಶ ನಾಯಕ, ಬಸವರಾಜ ದಂಡಿನ ಇತರರಿದ್ದರು.
Published on:
Copied
Follow Us
ವಿಜಯವಾಣಿ ಸುದ್ದಿಜಾಲ ಮಮದಾಪುರ
ಗ್ರಾಮಗಳು ಅಭಿವೃದ್ಧಿ ಹೊಂದಿದರೆ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂಬುದು ಮಹಾತ್ಮ ಗಾಂಧೀಜಿಯವರ ದೃಢಸಂಕಲ್ಪವಾಗಿತ್ತು. ಆ ನಿಟ್ಟಿನಲ್ಲಿ ರಾಜ್ಯದ ಪ್ರತಿ ಗ್ರಾಪಂಗಳಿಗೆ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಎಂದು ನಾಮಕರಣ ಮಾಡಲಾಗಿದೆ ಎಂದು ಪಿಡಿಒ ಎನ್.ಎನ್.ಹಾಸಿಲಕರ ಹೇಳಿದರು.
ಮಕ್ಕಳಗೇರಿ ಗ್ರಾಮದ ಮಹಾತ್ಮ ಗಾಂಧಿ ಗ್ರಾಪಂ ಆವರಣದಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸರ್ಕಾರದ ಪ್ರತಿ ಯೋಜನೆ ಬಡವರಿಗೆ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ ಎಂದರು. ವಿದ್ಯಾರ್ಥಿಗಳ ಸಮೂಹ ನೃತ್ಯ ನೋಡುಗರ ಗಮನ ಸೆಳೆಯಿತು. ಎಸ್ಸೆಸ್ಸೆಲ್ಸಿ ಪರೀೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಎಸ್ಡಿಎಂಸಿ ವತಿಯಿಂದ ನಗದು ಬಹುಮಾನ, ಪ್ರಶಸ್ತಿ ಪ್ರಮಾಣ ಪತ್ರ ವಿತರಿಸಲಾಯಿತು.