ಸಚಿವರು ಆಕ್ಷೇಪಾರ್ಹವಾದ ಹೇಳಿಕೆ ನೀಡಿದ್ದು, ನ್ಯಾಯಾಲಯವು ವಿಶೇಷ ವ್ಯಾಪ್ತಿಯ ಅಧಿಕಾರ ಬಳಸಿ, ಹೇಳಿಕೆ ವಜಾಗೊಳಿಸಬೇಕು ಎಂದು ಕೋರಿದ್ದಾರೆ. ಇದೊಂದು ಪ್ರಚಾರ ಹಿತಾಸಕ್ತಿ ಹೊಂದಿರುವ ಅರ್ಜಿಯಾಗಿದ್ದು, ಅರ್ಜಿದಾರರಿಗೆ 50,000 ದಂಡ ವಿಧಿಸಿ ವಜಾಗೊಳಿಸಲಾಗಿದೆ. ಎರಡು ವಾರಗಳಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ ದಂಡದ ಮೊತ್ತ ಪಾವತಿಸಬೇಕು ಎಂದು ನಿರ್ದೇಶಿಸಿದೆ.