ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಆಯ್ಕೆ: ಪರಿಷ್ಕೃತ ವೇಳಾಪಟ್ಟಿ ಪ್ರಕಟ

 ಕಾಲೇಜು ಶಿಕ್ಷಣ ಇಲಾಖೆ
ಕಾಲೇಜು ಶಿಕ್ಷಣ ಇಲಾಖೆ
Published on

ಪ್ರಮುಖ ಮುಖ್ಯಾಂಶಗಳು

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜು.18 ಕೊನೆಯ ದಿನವಾಗಿದೆ.
  • ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ಅರ್ಹತೆಯ ಆಧಾರದ ಮೇಲೆ ಜು.19ರಂದು ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗುವುದು.
  • ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿಯನ್ನು ಜು.28ರಂದು ಪ್ರಕಟಿಸಲಾಗುತ್ತದೆ
ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ 2026-27ನೇ ಸಾಲಿನಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ಭರ್ತಿ ಮಾಡುವುದಕ್ಕಾಗಿ ಆಯ್ಕೆ ಪ್ರಕ್ರಿಯೆಯ ಪರಿಷ್ಕೃತ ವೇಳಾಪಟ್ಟಿಯನ್ನು ಕಾಲೇಜು ಶಿಕ್ಷಣ ಇಲಾಖೆಯು ಪ್ರಕಟಿಸಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜು.18 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ಅರ್ಹತೆಯ ಆಧಾರದ ಮೇಲೆ ಜು.19ರಂದು ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗುವುದು. ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ಯಾವುದೇ ಬದಲಾವಣೆ ಅಥವಾ ತಪ್ಪುಗಳಿದ್ದಲ್ಲಿ ಅವುಗಳನ್ನು ಸರಿಪಡಿಸಲು ಜು.19ರಿಂದ 22 ರವರೆಗೆ ಎರಡು ದಿನಗಳ ಕಾಲ ಅರ್ಜಿ ತಿದ್ದುಪಡಿ ಮಾಡಲು ಅವಕಾಶವಿದೆ. ರಾಜ್ಯದ ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಲಭ್ಯವಿರುವ ಒಟ್ಟು ಬೋಧನಾ ಕಾರ್ಯಭಾರದ ಸಂಪೂರ್ಣ ವಿವರಗಳನ್ನು ತಾತ್ಕಾಲಿಕ ಕಾರ್ಯಭಾರ ಪಟ್ಟಿಯನ್ನು ಜು.25ರಂದು ಪ್ರಕಟಿಸಲಾಗುತ್ತದೆ.
ಕೌನ್ಸೆಲಿಂಗ್ ಮೆರಿಟ್ ಪಟ್ಟಿ ಹಾಗೂ ಕಾರ್ಯಭಾರವನ್ನು ಜು.26ರಂದು ಹಾಗೂ ಜು.28ರಂದು ಮೆರಿಟ್ ಪಟ್ಟಿಯನ್ವಯ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿಯನ್ನು ಜು.28ರಂದು ಪ್ರಕಟಿಸಲಾಗುತ್ತದೆ ಎಂದು ಕಾಲೇಜು ಶಿಕ್ಷಣ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ, ಅರ್ಜಿ ಸಲ್ಲಿಕೆಗಾಗಿ ಛ್ಚಛಿ.ಚ್ಟ್ಞಠಿ.ಜಟ.ಜ್ಞಿ ಗೆ ಭೇಟಿ ನೀಡಬಹುದು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net