ದೊಡ್ಡಬಳ್ಳಾಪುರದ ಹಣಬೆ ಸರ್ಕಾರಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಗ್ರಾಮ ಸಭೆಗೆ ಪಿಡಿಒ ಆಯಿಷಾ ಚಾಲನೆ ನೀಡಿದರು. ಗ್ರಾಪಂ ಸದಸ್ಯರಾದ ಭಾಗ್ಯಮ್ಮ, ಶಶಿಕಲಾ, ಎಚ್.ಸಿ.ಹರೀಶ್, ಆರ್.ಹರೀಶ್, ಶಾಲಾ ಮುಖ್ಯ ಶಿಕ್ಷಕಿ ಶಾಂತಮ್ಮ, ಸಹ ಶಿಕ್ಷಕರಾದ ಈರನಾಗಪ್ಪ, ನರಸಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಎನ್.ಜಯಲಕ್ಷ$್ಮಮ್ಮ, ಯುವ ಸಂಚಲನ ನವೀನ್ ಕುಮಾರ್, ಮಕ್ಕಳ ರಕ್ಷಣಾ ಘಟಕ ಶ್ರೀನಿವಾಸ್ ಇದ್ದರು.
ದೊಡ್ಡಬಳ್ಳಾಪುರ : ಮಕ್ಕಳಿಗೆ ಅನುಕೂಲವಾಗುವ ಉದ್ದೇಶದಿಂದ ಸರ್ಕಾರ ಗ್ರಾಪಂ ಮಟ್ಟದಲ್ಲಿ ಮಕ್ಕಳ ಹಕ್ಕುಗಳು, ಆರೋಗ್ಯ, ಶಿಕ್ಷಣ, ರಕ್ಷಣೆ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ಮತ್ತು ಈ ವಿಷಯಗಳಲ್ಲಿ ಮಕ್ಕಳನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ವಿಶೇಷ ಸಭೆಯೇ ಮಕ್ಕಳ ಗ್ರಾಮ ಸಭೆ ಎಂದು ಹಣಬೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಆಯಿಷಾ ಹೇಳಿದರು.
ಹಣಬೆ ಸರ್ಕಾರಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಗ್ರಾಮ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳ ಧ್ವನಿ ಮತ್ತು ಭಾಗವಹಿಸುವಿಕೆಗೆ ಅವಕಾಶ ನೀಡಿ ಅವರ ಸಮಸ್ಯೆ ಬಗೆಹರಿಸಿ ನಿರ್ಧಾರ ತೆಗೆದುಕೊಳ್ಳಲು ಸಹಕಾರಿಯಾಗಿದೆ. ಮಕ್ಕಳ ಸಮಸ್ಯೆಗಳನ್ನು ಅವರ ದೃಷ್ಟಿಕೋನದಿಂದ ತಿಳಿದುಕೊಳ್ಳುವುದು ಮತ್ತು ಪರಿಹಾರ ಕಂಡುಕೊಳ್ಳುವುದು ಅಗತ್ಯ.ಬಾಲ ಕಾರ್ಮಿಕ, ಬಾಲ್ಯ ವಿವಾಹ, ತಾರತಮ್ಯ ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚಿಸಿ, ತಡೆಗಟ್ಟುವಿಕೆ ಕ್ರಮ ಕೈಗೊಳ್ಳುವುದು. ಅಂಗನವಾಡಿ, ಶಾಲೆ, ಆರೋಗ್ಯ ಮತ್ತು ಇತರ ಸೌಲಭ್ಯ ಸುಧಾರಿಸಿ ಸಲಹೆ ಪಡೆಯುವುದು. ಗ್ರಾಪಂ ಮತ್ತು ಸಂಬಂಧಪಟ್ಟ ಇಲಾಖೆಗಳು ಮಕ್ಕಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ಯುವ ಸಂಚಲನ ಚಾರಿಟಬಲ್ ಟ್ರಸ್ಟ್ನ ನವೀನ್ ಕುಮಾರ್ ಮಾತನಾಡಿ, ಮಕ್ಕಳ ಸಮಸ್ಯೆ ಆಲಿಸದಿದ್ದರೆ ಅವರ ಮಾನಸಿಕ ಸಮಸ್ಯೆಗೆ ಕಾರಣವಾಗುತ್ತದೆ. ಮಕ್ಕಳಿಗೆ ಪಾಲಕರು ಹೆಚ್ಚು ಸಮಯ ಕೊಟ್ಟು ಅವರ ಮಾತು ಕೇಳುವುದು ಮುಖ್ಯ. ಪಂಚಾಯಿತಿಯ ಅಭಿವೃದ್ಧಿ ಮಕ್ಕಳ ಅಭಿವೃದ್ಧಿಯೊಂದಿಗೆ ಜತೆಯಾಗಿದ್ದು, ಹೆಚ್ಚಿನ ಆದ್ಯತೆ ನೀಡಿ ಕಾರ್ಯನಿರ್ವಹಿಸುವಂತಹ ವ್ಯವಸ್ಥೆ ನಮ್ಮಲ್ಲಿ ಬೇಕಿದೆ. ಮಕ್ಕಳಿಗೆ ಉತ್ತಮ ಪರಿಸರ ಉಳಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಮಕ್ಕಳಿಗಾಗಿಯೇ ದುಡಿಮೆ ಮಾಡುತ್ತಾ ಮತ್ತೋಂದೆಡೆ ಮಕ್ಕಳನ್ನು ರ್ನಿಲಕ್ಷಿ$್ಯಸುತ್ತಿರುವುದು ಮಕ್ಕಳ ಮೇಲಾಗುತ್ತಿರುವ ಪರಿಣಾಮಗಳನ್ನು ಪಾಲಕರು ಗಂಭೀವಾಗಿ ಪರಿಗಣಿಸಬೇಕಿದೆ ಎಂದು ತಿಳಿಸಿದರು.