ಮುಳಬಾಗಿಲು: ನಗರದ ಪುರಾಣ ಪ್ರಸಿದ್ಧ ಶ್ರೀ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ ಬುಧವಾರ ವಿಜೃಂಭಣೆಯಿಂದ ನೆರವೇರಿತು.Anjaneyaswamy Brahmarathotsava
ಶ್ರೀ ಸೀತಾ, ರಾಮಲಕ್ಷ$್ಮಣ ದೇವರ ಮೂರ್ತಿಯನ್ನು ಶಾಸಕ ಸಮೃದ್ಧಿ ವಿ.ಮಂಜುನಾಥ್, ಸೇವಾಕರ್ತರು ಹೊತ್ತು ರಥದಲ್ಲಿ ಪ್ರತಿಷ್ಠಾಪನೆ ಮಾಡಿದರು.
ದೇವಾಲಯದ ಪ್ರಧಾನ ಅರ್ಚಕ ಎಚ್.ಎ.ರಾಮಕೃಷ್ಣಮ್ಮಾಚಾರ್ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ರಥಕ್ಕೆ ಚಾಲನೆ ನೀಡಲಾಯಿತು. ತಹಸೀಲ್ದಾರ್ ವಿ.ಗೀತಾ, ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್.ಆರ್.ಸುವಾಸ್ ಶೆಟ್ಟಿ ಇತರರು ಪಾಲ್ಗೊಂಡಿದ್ದರು.
ಆಂಜನೇಯಸ್ವಾಮಿ ದೇವಾಲಯ ಮುಂಭಾಗದ ವೃತ್ತದಿಂದ ಕುರುಪೇಟೆ ವೃತ್ತದ ಮಾರ್ಗವಾಗಿ ತಾಲೂಕು ಕಚೇರಿ ಮುಂಭಾಗದವರೆಗೂ ರಥ ಮೆರವಣಿಗೆ ಮಾಡಲಾಯಿತು. ದಾರಿಯ ಎರಡು ಬದಿಗಳಲ್ಲೂ ಸೇವಕರ್ತರು ಪಾನಕ, ಕೋಸಂಬರಿ, ಮಜ್ಜಿಗೆ, ಪ್ರಸಾದ ವಿತರಣೆ ಮಾಡಿದರು.