ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯ

Greater encouragement for education is needed.
Greater encouragement for education is needed.
Published on
ಕೊರಟಗೆರೆ: ಶಿಕ್ಷಣದಿಂದ ಭಾರತ ಇಂದು ವಿಶ್ವಾದ್ಯಂತ ಕೀರ್ತಿ ಹೆಚ್ಚಿಸಿಕೊಂಡಿದೆ. ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಅಡಿಪಾಯವಾಗಿದೆ. ಈ ಕ್ಷೇತ್ರಕ್ಕೆ ಇನ್ನಷ್ಟು ಪ್ರೋತ್ಸಾಹ ಮತ್ತು ಸಹಕಾರ ದೊರೆಯಬೇಕಿದೆ ಎಂದು ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಲೂಕಿನ ಮನೋಭಾವ ಪ್ರತಿಷ್ಠಾನ ಚಾರಿಟಬಲ್​ ಟ್ರಸ್ಟ್​ನಿಂದ ಶುಕ್ರವಾರ ಸಿದ್ಧರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾಮಠದಲ್ಲಿ ಆಯೋಜಿಸಿದ್ದ ಮಠದ ವಿದ್ಯಾರ್ಥಿಗಳಿಗೆ ಉಚಿತ ನೋಟ್​ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಣೆಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರೂ ತಾವು ಪಡೆದಿರುವ ಶಿಕ್ಷಣದ ಮೂಲಕ ಉತ್ತಮ ಉದ್ಯೋಗ ಪಡೆದು, ಬರುವ ವೇತನದ ಒಂದು ಭಾಗವನ್ನು ಸಮಾಜದ ಕಲ್ಯಾಣಕ್ಕೆ ಹಾಗೂ ಶಿಕ್ಷಣದಿಂದ ವಂಚಿತರಾಗುವ ಮಕ್ಕಳ ವಿದ್ಯಾಭ್ಯಾಸಕ್ಕೆ ಮೀಸಲಿಡಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಮನೋಭಾವ ಪ್ರತಿಷ್ಠಾನ ಚಾರಿಟಬಲ್​ ಟ್ರಸ್ಟ್​ನಿಂದ ಕೊರಟಗೆರೆ ಮತ್ತು ಮಧುಗಿರಿ ತಾಲೂಕಿನ ವಿವಿಧ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 575 ವಿದ್ಯಾರ್ಥಿಗಳಿಗೆ ಉಚಿತ ನೋಟ್​ಬುಕ್​ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಟ್ರಸ್ಟ್​ನ ಸದಸ್ಯರಾದ ಸುಜಯ್​, ಮಹೇಶ್​, ಮೋಹನ್​, ಅಭಿಜಿತ್​ ಮತ್ತು ಅಭಿಷೇಕ್​ ಸೇರಿದಂತೆ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net