ಮಹಿಳಾ ಸಬಲೀಕರಣಕ್ಕೆ ಗೃಹಲಕ್ಷ್ಮಿ ವರ

ಹನೂರಿನಲ್ಲಿ ಆಯೋಜಿಸಿದ್ದ ಗೃಹಲಕ್ಷ್ಮೀ ಯೋಜನೆಯ 3ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪಾಳ್ಯ ರಾಚಯ್ಯ ಉದ್ಘಾಟಿಸಿದರು. ಉಮೇಶ್, ಅಂಬಿಕಾ, ಶೇಖರ್, ಮಷೀರ್ ಇತರರು ಇದ್ದರು.
ಹನೂರಿನಲ್ಲಿ ಆಯೋಜಿಸಿದ್ದ ಗೃಹಲಕ್ಷ್ಮೀ ಯೋಜನೆಯ 3ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪಾಳ್ಯ ರಾಚಯ್ಯ ಉದ್ಘಾಟಿಸಿದರು. ಉಮೇಶ್, ಅಂಬಿಕಾ, ಶೇಖರ್, ಮಷೀರ್ ಇತರರು ಇದ್ದರು.
Published on
ಹನೂರು: ಮಹಿಳೆಯರು ಆರ್ಥಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಗೃಹಲಕ್ಷ್ಮಿ ಯೋಜನೆ ವರದಾನವಾಗಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪಾಳ್ಯ ರಾಚಯ್ಯ ಅಭಿಪ್ರಾಯಪಟ್ಟರು.

ಪಟ್ಟಣದ ಡಾ.ಅಂಬೇಡ್ಕರ್ ಸಮುದಾಯ ಭವನದಲ್ಲಿ ಶುಕ್ರವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಿದ್ದ ಗೃಹಲಕ್ಷ್ಮಿ ಯೋಜನೆಯ 3ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರು ಆರ್ಥಿಕ ಸ್ವಾತಂತ್ರ್ಯ ಹಾಗೂ ಆತ್ಮ ಗೌರವದ ಸಂಕೇತವಾಗಿದೆ. ಕಳೆದ ಮೂರು ವರ್ಷಗಳಿಂದ ಈ ಯೋಜನೆಯ ಪ್ರಯೋಜನ ಪಡೆಯುತ್ತಿರುವ ಮಹಿಳೆಯರು ಅದರಲ್ಲೂ ಬಡ ಕುಟುಂಬಕ್ಕೆ ಸೇರಿದವರು ಆರ್ಥಿಕ ಹಾಗೂ ಸಾಮಾಜಿಕವಾಗಿ ಸಬಲರಾಗಿದ್ದಾರೆ. ಕೆಲವು ಮಹಿಳೆಯರು ಸ್ವ ಉದ್ಯೋಗ ಆರಂಭಿಸಿ ಉತ್ತಮ ಜೀವನ ರೂಪಿಸಿಕೊಂಡಿದ್ದಾರೆ. ಹಾಗಾಗಿ ಈ ಯೋಜನೆ ಬಗ್ಗೆ ಮಹಿಳೆಯರಿಂದ ಉತ್ತಮ ಮೆಚ್ಚುಗೆ ವ್ಯಕ್ತವಾಗಿದೆ. ಈ ಯೋಜನೆಯು ಮುಂದುವರಿಯಲಿದ್ದು, ಆರ್ಹ ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದು ಇನ್ನಷ್ಟು ಆರ್ಥಿಕವಾಗಿ ಸದೃಢರಾಗಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ಸಿಡಿಪಿಒ ಅಂಬಿಕಾ ಅವರು ತಾಲೂಕಿನಲ್ಲಿ ಕಳೆದ 3 ವರ್ಷದಿಂದ ಫಲಾನುಭವಿಗಳಿಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಮಾಹಿತಿ ತಿಳಿಸಿದರು. ಬಳಿಕ ಅಧಿಕಾರಿಗಳು ಹಾಗೂ ಮಹಿಳೆಯರು ಆವರಣದಲ್ಲಿ ಸಸಿ ನೆಟ್ಟು ನೀರೆರೆದರು. ತಾಪಂ ಇಒ ಉಮೇಶ್, ಗ್ಯಾರಂಟಿ ಸಮಿತಿ ಸದಸ್ಯರಾದ ಮಷೀರ್, ನವಾಬ್, ನಾಗೇಶ್, ಬಸವರಾಜು, ಶೇಖರ್, ಮಹದೇವಮ್ಮ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net