ತುರುವೇಕೆರೆ: ದಾವಣಗೆರೆ ಮತ್ತು ಬಾಗಲಕೋಟೆಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ದೇವರಾಜು ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ದೇವರಾಜು ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಿದ್ದು, ಇದು ಬಡಜನರ ಪಾಲಿಗೆ ಕಲ್ಪವೃಕ್ಷವಾಗಿದೆ. ಅಲ್ಲದೇ ಅಭಿವೃದ್ಧಿ ಕಾರ್ಯಗಳನ್ನೂ ಸಹ ಮಾಡುತ್ತಿದೆ ಎನ್ನುವುದಕ್ಕೆ ಬಾಗಲಕೋಟೆ ಮತ್ತು ದಾವಣಗೆರೆಯ ಚುನಾವಣೆಯ ಫಲಿತಾಂಶವೇ ಸಾಕ್ಷಿ ಎಂದರು.
ಮುಖಂಡರಾದ ಚಂದ್ರು, ಜಾಫರ್, ನಾಗಲಾಪುರ ಜಗದೀಶ್, ಎಸ್ಸಿ&ಎಸ್ಟಿ ಘಟಕದ ಮುಖಂಡ ಜೋಗಿ ಶಿವರಾಜು, ಮುನಿಯೂರು ಗಿರೀಶ್ ಇದ್ದರು.