ಗ್ಯಾರಂಟಿ ಯೋಜನೆ ಜನಸಾಮಾನ್ಯರ ಬದುಕಿಗೆ ಬಲ

ಹುಮನಾಬಾದ್​ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕರೆದಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯಾಧ್ಯ ಎಚ್​.ಎಂ. ರೇವಣ್ಣ, ತಾಲೂಕು ಅಧ್ಯಕ್ಷ ಅಫ್ಸರ್​ಮಿಯಾ,   ಇಒ ದೀಪಿಕಾ ನಾಯ್ಕರ್​ ಹಾಗೂ ಸಮಿತಿ ಸದಸ್ಯರು ಇದ್ದರು.
ಹುಮನಾಬಾದ್​ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕರೆದಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯಾಧ್ಯ ಎಚ್​.ಎಂ. ರೇವಣ್ಣ, ತಾಲೂಕು ಅಧ್ಯಕ್ಷ ಅಫ್ಸರ್​ಮಿಯಾ, ಇಒ ದೀಪಿಕಾ ನಾಯ್ಕರ್​ ಹಾಗೂ ಸಮಿತಿ ಸದಸ್ಯರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಎಚ್​.ಎಂ. ರೇವಣ್ಣ ಅಭಿಮತ
  • ಹುಮನಾಬಾದ್​ನಲ್ಲಿ ಪ್ರಗತಿ ಪರಿಶೀಲನಾ ಸಭೆ
ಹುಮನಾಬಾದ್​: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿಗೆ ಬಲ ತುಂಬುತ್ತಿದ್ದು, ಅವುಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂಬ ವದಂತಿಗಳಿಗೆ ಯಾವುದೇ ಆಧಾರವಿಲ್ಲ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್​.ಎಂ. ರೇವಣ್ಣ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕರೆದಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಕುರಿತು ಕೆಲ ರಾಜಕೀಯ ಪಗಳು ಜನರಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಸುತ್ತಿದ್ದು, ಜನರು ಅಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದರು.
ರಾಜ್ಯದ ಲಕ್ಷಾಂತರ ಕುಟುಂಬಗಳು ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದು, ವಿಶೇಷವಾಗಿ ಮಹಿಳೆಯರು ಮತ್ತು ನಿರುದ್ಯೋಗಿಗಳಿಗೆ ಯೋಜನೆಗಳು ಆಶಾಕಿರಣವಾಗಿವೆ. ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೆಚ್ಚಿಸಲು ಹಾಗೂ ಕುಟುಂಬಗಳ ಜೀವನಮಟ್ಟ ಸುಧಾರಿಸಲು ಗ್ಯಾರಂಟಿ ಯೋಜನೆಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ತಿಳಿಸಿದರು.
ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಆಹಾರ ಧಾನ್ಯಗಳನ್ನು ದುರುಪಯೋಗಪಡಿಸಿಕೊಳ್ಳದಂತೆ ಹಾಗೂ ಕಾಳಸಂತೆಗೆ ಹರಿದುಹೋಗದಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಗ್ಯಾರಂಟಿ ಯೋಜನೆಗಳ ತಾಲೂಕು ಸಮಿತಿ ಅಧ್ಯಕ್ಷ ಅಫ್ಸರ್​ಮಿಯಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ದೀಪಿಕಾ ನಾಯ್ಕರ್​, ಸಮಿತಿ ಸದಸ್ಯರಾದ ಶಿವಕುಮಾರ ಬೆಳಕೇರಾ, ಶಂಕರನಾಗ ಸಾಹುಕಾರ, ಲಕ್ಷ್ಮಣ ಸಿಂಗೆ, ರಂಜಿತ ಮಾನಕರೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net