ಗುರುಗಳ ಮಾರ್ಗದರ್ಶನವೇ ಯಶಸ್ಸಿನ ಬುನಾದಿ
| ಡಾ.ಎಸ್. ಕೆ. ಹಿರೇಮಠ ಅಭಿಪ್ರಾಯ | ಗುರು ಪೂರ್ಣಿಮೆ ಕಾರ್ಯಕ್ರಮ
ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ:
ಭಾರತೀಯ ಪರಂಪರೆಯಲ್ಲಿ ಗುರು-ಶಿಷ್ಯರ ಸಂಬAದಕ್ಕೆ ವಿಶೇಷ ಸ್ಥಾನಮಾನವಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಗುರುಗಳ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಗದಗದÀ ಡಿಜಿಎಂ ಆಯುರ್ವೇದ ವೈದ್ಯಕೀಯ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಎಸ್. ಕೆ. ಹಿರೇಮಠ ಅಭಿಪ್ರಾಯಪಟ್ಟರು.
ಪಟ್ಟಣದ ಕೆಎಲ್‌ಇ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ ಬುಧವಾರ ಆಯೋಜಿಸಿದ್ದ ಗುರು ಪೂರ್ಣಿಮೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗುರುಗಳ ಮಾರ್ಗದರ್ಶನವು ವಿದ್ಯಾರ್ಥಿಗಳಲ್ಲಿ ಜ್ಞಾನ, ಶಿಸ್ತು, ಸಂಸ್ಕಾರ ಮತ್ತು ಸೇವಾ ಮನೋಭಾವ ಬೆಳೆಸುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಕಿರಣಕುಮಾರ ಮುತ್ನಾಳಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಮೌಲ್ಯಯುತ ಶಿಕ್ಷಣ, ಸಂಸ್ಕಾರ ಬೆಳೆಸುವಲ್ಲಿ ಗುರುವಿನ ಪಾತ್ರ ಮಹತ್ವದ್ದಾಗಿದೆ. ಪ್ರತಿಯೊಬ್ಬರು ಗುರುಗಳ ಗೌರವಿಸಬೇಕು ಎಂದು ಹೇಳಿದರು.
ಡಾ.ಬಿ.ಬಿ ದೇಸಾಯಿ, ಡಾ. ರೀನಾ ಹೊನವಾಡ, ಡಾ.ರವಿ ಮಡಿವಾಳರ, ಡಾ.ಸಂತೋಷ ಶಿವಣ್ಣನವರ, ಡಾ.ಶ್ರೀಧರ ಲಕ್ಕುಂಡಿ ಇತರರಿದ್ದರು.