ಜೀವನದಲ್ಲಿ ಸದಾಕಾಲ ಗುರುವಿನ ಮಾರ್ಗದರ್ಶನ ಅಗತ್ಯ

ರಬಕವಿ/ಬನಹಟ್ಟಿ ತಾಲೂಕಿನ ಹಳಿಂಗಳಿ ಭದ್ರಗಿರಿ ಬೆಟ್ಟದದಲ್ಲಿ ಗುರುಪೂರ್ಣಿಮೆ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ  ಜೈನ ಮುನಿ ಆಚಾರ್ಯ  ಕುಲರತ್ನಭೂಷಣ ಮಹಾರಾಜರು ಆಶೀರ್ವಚನ ನೀಡಿದರು.
ರಬಕವಿ/ಬನಹಟ್ಟಿ ತಾಲೂಕಿನ ಹಳಿಂಗಳಿ ಭದ್ರಗಿರಿ ಬೆಟ್ಟದದಲ್ಲಿ ಗುರುಪೂರ್ಣಿಮೆ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಜೈನ ಮುನಿ ಆಚಾರ್ಯ ಕುಲರತ್ನಭೂಷಣ ಮಹಾರಾಜರು ಆಶೀರ್ವಚನ ನೀಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಹಳಿಂಗಳಿ ಭದ್ರಗಿರಿ ಬೆಟ್ಟದ ಜೈನ ಮುನಿ ಕುಲರತ್ನಭೂಷಣ ಮಹಾರಾಜ ಅಭಿಮತ
  • ಪ್ರಾಥಮಿಕ ಶಿಕ್ಷಣವೇ ಭದ್ರ ಬುನಾದಿ
ರಬಕವಿ/ಬನಹಟ್ಟಿ: ಗುರುವಿಗೆ ಶರಣಾಗದೆ ನಿಜವಾದ ಮುಕ್ತಿ ದೊರೆಯುವುದಿಲ್ಲ. ಜೀವನದಲ್ಲಿ ಸನ್ಮಾರ್ಗದಲ್ಲಿ ಸಾಗಲು ಗುರುಗಳ ಮಾರ್ಗದರ್ಶನ ಸದಾಕಾಲ ಅಗತ್ಯ ಎಂದು ಹಳಿಂಗಳಿ ಭದ್ರಗಿರಿ ಬೆಟ್ಟದ ಜೈನ ಮುನಿ 108 ಕುಲರತ್ನಭೂಷಣ ಮಹಾರಾಜರು ಹೇಳಿದರು.
ಪಟ್ಟಣದಲ್ಲಿ ಗುರುಪೂರ್ಣಿಮೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದ ಅವರು, ಜೀವನದಲ್ಲಿ ಜ್ಞಾನ, ಸಂಸ್ಕಾರ ಹಾಗೂ ಆತ್ಮೋನ್ನತಿಗೆ ಗುರುಗಳ ಪಾತ್ರ ಅನನ್ಯ. ಗುರು ತೋರಿಸಿದ ಧರ್ಮ ಮಾರ್ಗದಲ್ಲಿ ನಡೆಯುವವರಿಗೆ ಮಾತ್ರ ನಿಜವಾದ ಆತ್ಮ ಸಾಕ್ಷಾತ್ಕಾರ ಮತ್ತು ಜೀವನದ ಸಾರ್ಥಕತೆ ದೊರೆಯುತ್ತದೆ ಎಂದು ತಿಳಿಸಿದರು.
ಗುರುವಿನ ಮಾರ್ಗದರ್ಶನದಲ್ಲಿ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪ್ರಾಥಮಿಕ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಈ ಹಂತದಲ್ಲಿ ಉತ್ತಮ ಶಿಕ್ಷಣ ಹಾಗೂ ಮೌಲ್ಯಗಳನ್ನು ಕಲಿಸಿದರೆ ದೇಶದ ಅಭಿವೃದ್ಧಿಗೆ ಶಕ್ತಿಶಾಲಿ ಪ್ರಜೆಗಳನ್ನು ರೂಪಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಲ್ಲಿ ಶಿಸ್ತು, ನೈತಿಕತೆ, ಸಾಮಾಜಿಕ ಜವಾಬ್ದಾರಿ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಗುರುವಿನಷ್ಟೇ ಪಾಲಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಮುನಿಗಳು ತಿಳಿಸಿದರು.
ವಿಜಯಪುರ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳ ಬೋಧನೆಗಳು ಹಾಗೂ ಸಂದೇಶಗಳನ್ನು ಸ್ಮರಿಸಿದ ಅವರು, ಇಂದಿನ ಯುವ ಜನತೆ ಗುರುಗಳ ಆದರ್ಶಗಳನ್ನು ಅಳವಡಿಸಿಕೊಂಡು ಮೌಲ್ಯಯುತ ಜೀವನ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.
ಶ್ರಾವಕ-ಶ್ರಾವಕಿಯರು, ಗ್ರಾಮಸ್ಥರು ಹಾಗೂ ಭಕ್ತರು ಭಾಗವಹಿಸಿ ಗುರುಗಳಿಗೆ ನಮನ ಸಲ್ಲಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net