ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿಷಯವಾಗಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಎಚ್.ಕೆ. ಪಾಟೀಲ, ದೇಶದ ಆರ್ಥಿಕ ಸ್ಥಿತಿ ಸರಿಯಾದ ಮಾರ್ಗದಲ್ಲಿ ಇಲ್ಲ ಎಂಬ ಕಾರಣಕ್ಕೆ ಜನರ ಬದುಕನ್ನು ಗಾಸಿಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು. ಏನಿದು, ಎರಡು ದಿನಕ್ಕೊಮ್ಮೆ, ಮೂರು ದಿನಕ್ಕೊಮ್ಮೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಸುತ್ತಿರುವುದು ? ಚುನಾವಣೆ ಮೂರು ತಿಂಗಳು ನಡೆದಾಗ ಒಂದು ರೂಪಾಯಿಯೂ ಹೆಚ್ಚಿಸಲಿಲ್ಲ. ಆಗ ದೇಶದ ಆರ್ಥಿಕ ಪರಿಸ್ಥಿತಿಯ ಕಲ್ಪನೆ ಇರಲಿಲ್ಲವೇ ? ಎಂದು ಪ್ರಶ್ನಿಸಿದರು.