ರಾಜ್ಯದಲ್ಲಿ ವಾರಪೂರ್ತಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ

ಆಲಿಕಲ್ಲು ಮಳೆ
ಆಲಿಕಲ್ಲು ಮಳೆ
Published on
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ, ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು,ಮಿಂಚು,ಬಿರುಗಾಳಿ ಸಹಿತ ವಾರಪೂರ್ತಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ತುಮಕೂರಿನ ಮಧುಗಿರಿಯಲ್ಲಿ ಸೋಮವಾರ ಸಾಧಾರಣ ವರ್ಷಧಾರೆಯಾಯಿತು. ರಾಜ್ಯದ ಹಲವೆಡೆ ಬಿಸಿಲು ವಾತಾವರಣ ಮುಂದುವರಿದಿದೆ. ಮಧ್ಯಾಹ್ನ ಮತ್ತು ಸಂಜೆ ವೇಳೆ ಭಾಗಶಃ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುತ್ತಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು,ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ಮಾ.24ರಿಂದ ಮಾ.30ರವರೆಗೆ ಹಾಗೂ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರ, ಮೈಸೂರು, ಚಾಮರಾಜನಗರದಲ್ಲಿ ಮುಂದಿನ 3 ದಿನ ಆಲಿಕಲ್ಲು ಮಳೆಯಾಗಲಿದೆ.
ಚಿತ್ರದುರ್ಗ,ಕೊಪ್ಪಳ,ದಾವಣಗೆರೆ, ತುಮಕೂರಿನಲ್ಲಿ ಮಾ.25ರಿಂದ ಮಾ.26ರವರೆಗೆ,ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಕೋಲಾರದಲ್ಲಿ ಮಾ.29ರಿಂದ ಮುಂದಿನ 2 ದಿನ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗಂಟೆಗೆ 40 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಕಲಬುರಗಿಯಲ್ಲಿ ಸೋಮವಾರ 37.3 ಡಿ.ಸೆ. ಉಷ್ಣಾಂಶ ದಾಖಲಾಗಿದೆ. ಮೈಸೂರಿನಲ್ಲಿ ಕನಿಷ್ಠ ತಾಪಮಾನದಲ್ಲಿ 18.2 ಡಿ.ಸೆ. ವರದಿಯಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net