ನಗರಸಭೆ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಾಮಾನ್ಯ ಸಭೆಯಲ್ಲಿ ನಗರಸಭೆ ಸದಸ್ಯ ರಾಧಾಕೃಷ್ಣ ಅವರು ಸ.ನಂ.118ರಲ್ಲಿ ಮಂಜುನಾಥ್ ಎಂಬ ಹೆಸರಿಗೆ 2023ರ ಮೇ 30ರಂದು ಸಹಿ ಮಾಡಿರುವಂತೆ ನಕಲಿ ಹಕ್ಕು ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಇದಕ್ಕೆ ಪತ್ರಿಕ್ರಿಯಿಸಿದ ಪೌರಾಯುಕ್ತ ರುದ್ರೇಶ್, ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.