ಮದ್ದೂರು ನಗರದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯಸ್ವಾಮಿಯನ್ನು ವಿಶೇಷವಾಗಿ ಅಲಂಕಾರ ಮಾಡಿರುವುದು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಹೊಳೆ ಆಂಜನೇಯಸ್ವಾಮಿ ದೇವಾಲಯ
ಕೊನೆಯ ಶ್ರಾವಣ ಶನಿವಾರ
ಮದ್ದೂರು: ನಗರದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಕೊನೆಯ ಶ್ರಾವಣ ಶನಿವಾರ ಅಂಗವಾಗಿ ವಿಶೇಷ ಪೂಜೆ, ಹನುಮೋತ್ಸವ ನಡೆಯಿತು.
ಪ್ರಧಾನ ಅರ್ಚಕ ಪ್ರದೀಪ್ ಆಚಾರ್ಯ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಬೆಳಗ್ಗೆ ಮುಖ್ಯಪ್ರಾಣ ದೇವರಿಗೆ ಮಧು, ಪಂಚಾಮೃತ ಅಭಿಷೇಕ, ಅರಿಶಿಣ ಅಲಂಕಾರ, ಮಹಾಮಂಗಳಾರತಿ ಸೇರಿದಂತೆ ಇತರ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ವಿಶೇಷವಾಗಿ ಸೀತಾ, ರಾಮ ಹಾಗೂ ಹನುಮನ ಉತ್ಸವ ದೇಗುಲದ ಆವರಣದಲ್ಲಿ ಅದ್ದೂರಿಯಾಗಿ ನೆರವೇರಿತು. ಉತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು. ಬೆಳಗ್ಗೆ ಹಾಗೂ ಸಂಜೆ ಭಕ್ತರಿಗೆ ತೀರ್ಥ, ಪ್ರಸಾದ ವಿತರಿಸಲಾಯಿತು.