ಹನೂರು ತಾಲೂಕು ಬರ ಪೀಡಿತ ಘೋಷಣೆಯಾಗಲಿ

ಮಲೆಮಹದೇಶ್ವರ ಬೆಟ್ಟದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಹುತಾತ್ಮ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸೋಮಣ್ಣ, ಚಿಕ್ಕರಾಜು, ಪುಟ್ಟಸ್ವಾಮಿ, ಶ್ವೇತಾ, ಪ್ರಭುಸ್ವಾಮಿ ಇತರರಿದ್ದರು.
ಮಲೆಮಹದೇಶ್ವರ ಬೆಟ್ಟದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಹುತಾತ್ಮ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸೋಮಣ್ಣ, ಚಿಕ್ಕರಾಜು, ಪುಟ್ಟಸ್ವಾಮಿ, ಶ್ವೇತಾ, ಪ್ರಭುಸ್ವಾಮಿ ಇತರರಿದ್ದರು.
Published on
ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದ ರಂಗಮಂದಿರದಲ್ಲಿ ಮಂಗಳವಾರ ರೈತ ಸಂಘ ಹಾಗೂ ಹರು ಸೇನೆಯ ವತಿಯಿಂದ ರೈತ ಹುತಾತ್ಮ ದಿನವನ್ನು ಆಚರಿಸಲಾಯಿತು.

ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಸೋಮಣ್ಣ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ರೈತರ ಪಾತ್ರ ಅಪಾರ. ಆದರೆ ಒಳಿತಿಗಾಗಿ ಹೋರಾಡಿದ ರೈತರು ಪ್ರಾಣತೆತ್ತದ್ದು ನಿಜಕ್ಕೂ ದುರಂತ. ಹಾಗಾಗಿ ಪ್ರತಿಯೊಬ್ಬರೂ ಸಂಘಟಿತರಾಗಬೇಕು. ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಳ್ಳಲು ಹಾಗೂ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಮುಂದಾಗಬೇಕು. ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಳ್ಳಬೇಕು ಎಂದು ತಿಳಿಸಿದರು.|

ತಾಲೂಕು ಅಧ್ಯಕ್ಷ ಚಿಕ್ಕರಾಜು ಮಾತನಾಡಿ, ತಾಲೂಕಿನಲ್ಲಿ ಮಳೆ ಕೈ ಕೊಟ್ಟಿರುವ ಪರಿಣಾಮ ಬಿತ್ತನೆ ಕಾರ್ಯ ನಡೆದಿಲ್ಲ. ಇತ್ತ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಸರ್ಕಾರ ಇದನ್ನು ಮನಗಂಡು ಹನೂರು ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದರು.

ಇದಕ್ಕೂ ಮುನ್ನ ಹುತಾತ್ಮ ರೈತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ದೇಗುಲದ ಸುತ್ತ ಪ್ರದಕ್ಷಿಣೆ ಹಾಕಲಾಯಿತು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜು, ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ, ತಾಲೂಕು ಸಂಘದ ಗೌರವಾಧ್ಯಕ್ಷ ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ ಪ್ರಭುಸ್ವಾಮಿ, ಸಹಾಯಕ ಕಾರ್ಯದರ್ಶಿ ಸುಂದ್ರಪ್ಪ, ಅಧ್ಯಕ್ಷರಾದ ಗುಂಡ್ಲುಪೇಟೆಯ ಪ್ರಭುಸ್ವಾಮಿ, ಯಳಂದೂರಿನ ನಾಗರಾಜು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net